13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Venkaih-Naidu-n

ನವದೆಹಲಿ.ಆ.05 : ಉಪ ರಾಷ್ಟ್ರಪತಿ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ದೇಶದ 13ನೇ ಉಪರಾಷ್ಟ್ರಪತಿಯಾಗಿ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ವೆಂಕಯ್ಯನಾಯ್ಡು ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಆಡಳಿತ ಪಕ್ಷದ ವೆಂಕಯ್ಯನಾಯ್ಡು ಅವರು 516 ಮತ ಪಡೆದರೆ, ವಿರೋಧ ಪಕ್ಷದ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ 244 ಮತ ಪಡೆದು ಸೋಲನ್ನು ಅನುಭವಿಸಿದ್ದಾರೆ.

ಶೇ 98.21ರಷ್ಟು ಮತದಾನವಾಗಿತ್ತು. ಸಂಜೆಯೇ ಮತ ಎಣಿಕೆ ನಡೆದಿದ್ದು, ವೆಂಕಯ್ಯ ನಾಯ್ಡು 516 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ವೆಂಕಯ್ಯ ನಾಯ್ಡು ಅವರ ವಿರುದ್ಧ ಯುಪಿಎ ಅಭ್ಯರ್ಥಿಯಾಗಿ ಗೋಪಾಲಕೃಷ್ಣ ಗಾಂಧಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಅವರು 244 ಮತಗಳನ್ನು ಪಡೆದು ಸೋಲು ಅನುಭವಿಸಿದರು. 771 ಸಂಸದರು ಚುನಾವಣೆಯಲ್ಲಿ ಮತ ಚಲಾವಣೆ ಮಾಡಿದ್ದರು. ಈ ಪೈಕಿ 11 ಮತಗಳು ಅಸಿಂಧುವಾದವು. ಶೇಕಡವಾರು ಮತಗಳಲ್ಲಿ ವೆಂಯ್ಯ ಅವರು ಶೇ.68 ಹಾಗೂ ಗೋಪಾಲಕೃಷ್ಣ ಗಾಂಧಿ ಶೇ.32 ಮತ ಪಡೆದಿದ್ದಾರೆ.

ವೆಂಕಯ್ಯ ನಾಯ್ಡು ಹಿನ್ನೆಲೆ :

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ 1949 ಜುಲೈ 1ರಂದು ಜನಿಸಿದ ವೆಂಕಯ್ಯ ನಾಯ್ಡು ಅವರು 1978 ಮತ್ತು 1983ರಲ್ಲಿ ಆಂಧ್ರ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ನಗರಾಭಿವೃದ್ಧಿ, ಸಂಸದೀಯ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. 1998, 2004, 2010 ಹೀಗೆ ಮೂರು ಬಾರಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಆಗಸ್ಟ್ 10ರಂದು ಹಮೀದ್ ಅನ್ಸಾರಿ ಅವರ ಅವಧಿ ಮುಗಿಯಲಿದ್ದು, ವೆಂಕಯ್ಯ ನಾಯ್ಡು ಅವರು ಉಪ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

 

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin