ಮರಕ್ಕೆ ಕಾರು ಡಿಕ್ಕಿಯಾಗಿ ಒಬ್ಬ ಸಾವು, ಇಬ್ಬರಿಗೆ ಗಾಯ

Car-Accidnt--01

ತುಮಕೂರು,ಆ.6-ಹುಣಸೆಮರಕ್ಕೆ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಹುಳಿಯಾರಿನ ಮಲ್ಲಿಕಾರ್ಜುನ ಸ್ವಾಮಿ ಮೃತಪಟ್ಟ ದುರ್ದೈವಿ. ಮಲ್ಲಿಕಾರ್ಜುನ ಸ್ವಾಮಿ ಅವರು ಬಸವೇಶ್ವರ ಜ್ಯುವೆಲರ್ಸ್‍ನ ಮಾಲೀಕರಾಗಿದ್ದು , ನಿನ್ನೆ ಕುಟುಂಬ ಸಮೇತ ಬೀರೂರಿನ ಸಂಬಂಧಿಕರ ಮದುವೆಗೆ ಹೋಗಿದ್ದರು.  ಮದುವೆ ಮುಗಿಸಿಕೊಂಡು ಇನೋವಾ ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ ರಾತ್ರಿ 12.30ರ ಸುಮಾರಿನಲ್ಲಿ ಹುಳಿಯಾರಿನ ತಿಪಟೂರು ರಸ್ತೆಯಿಂದ ಬಂಡೆಯ ತಿರುವಿನಲ್ಲಿದ್ದ ಹುಣಸೆ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಮಲ್ಲಿಕಾರ್ಜುನ ಅವರಿಗೆ ತಲೆ ತೀವ್ರ ಪೆಟ್ಟಾಗಿದ್ದು , ಚಿಕ್ಕನಾಯಕನಹಳ್ಳಿಯ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಪತ್ನಿ ಸಂಧ್ಯಾಗೆ ಕಾಲು ಮುರಿದಿದ್ದು , ಅಕ್ಕ ಅನಿತಾ ಅವರ ಕೈಗೆ ಗಾಯಗಳಾಗಿವೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin