70ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಂದ ಹಿಂಡಲಗಾ ಜೈಲು ತಪಾಸಣೆ

ಈ ಸುದ್ದಿಯನ್ನು ಶೇರ್ ಮಾಡಿ

Hindalaga-jail--01

ಬೆಳಗಾವಿ, ಆ.6- ಗಾಂಜಾ ಸಾಗಾಟ ಸೇರಿದಂತೆ ಇತರೆ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಕಮೀಷನರ್ ಟಿ.ಜಿ.ಕೃಷ್ಣಭಟ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಹಿಂಡಲಗಾ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.ಪೊಲೀಸ್ ಕಮೀಷನರ್ ನೇತೃತ್ವದ ತಂಡದಲ್ಲಿ ಡಿಸಿಪಿಗಳಾದ ಸೀಮಾಲಾಟಕರ್, ಅಮರನಾಥರೆಡ್ಡಿ ಸೇರಿದಂತೆ 70ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಇಂದು ಜೈಲಿಗೆ ಭೇಟಿ ನೀಡಿದ್ದು, ಶ್ವಾನದಳದ ಮೂಲಕ ಜೈಲಿನಾದ್ಯಂತ ತೀವ್ರ ತಪಾಸಣೆ ನಡೆಸಲಾಯಿತು.  ಕಳೆದ ಹಲವು ದಿನಗಳ ಹಿಂದೆ ಹಿಂಡಲಗಾ ಜೈಲಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ, ಮಾರಕಾಸ್ತ್ರಗಳು ಹಾಗೂ ಮೊಬೈಲ್‍ಗಳ ಬಳಕೆಯಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಇಂದು ಪೊಲೀಸ್ ಅಧಿಕಾರಿಗಳ ತಂಡ ಜೈಲಿಗೆ ಭೇಟಿ ನೀಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin