ಕೌಟುಂಬಿಕ ಕಲಹದ ವೇಳೆ ಮಗನನ್ನೇ ಕೊಂದ ತಂದೆ

Murder-01

ಹುಬ್ಬಳ್ಳಿ, ಆ.7- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಹನುಮಂತ ದೇವಾಲಯ ಸಮೀಪದ ನಿವಾಸಿ, ರೈಲ್ವೆ ನೌಕರ ರೆಡ್ಡಿ ಮೇಸ್ತ್ರಿ ಎಂಬುವರ ಮಗ ವಿನಯ್ (16) ಕೊಲೆಯಾದ ನತದೃಷ್ಟ.
ರಾತ್ರಿ ಕೌಟುಂಬಿಕ ವಿಚಾರವಾಗಿ ತಂದೆ-ಮಗನ ನಡುವೆ ಜಗಳ ನಡೆದಿದೆ. ಒಂದು ಅಂತದಲ್ಲಿ ತಾಳ್ಮೆ ಕಳೆದುಕೊಂಡ ತಂದೆ ರೆಡ್ಡಿ ಚಾಕುವಿನಿಂದ ಮಗನ ಹೊಟ್ಟೆಗೆ ತಿವಿದು ಕೊಲೆ ಮಾಡಿ ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ನೆರೆಹೊರೆಯವರು ರೆಡ್ಡಿಮೇಸ್ತ್ರಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಕೇಶ್ವಾಪುರ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin