ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು

KSRTC-Bu-s-01

ಮೊಳಕಾಲ್ಮುರು, ಆ.7- ತಾಲ್ಲೂಕಿನ ಬೊಮ್ಮಗೊಂಡನಕೆರೆ (ಬಿಜಿ ಕೆರೆ) ಬಳಿ ಸಂಭವಿಸಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮತ್ತು ಲಾರಿ ಅಪಘಾತದಲ್ಲಿ ಬಸ್ ಚಾಲಕ ಮತ್ತು ಒಬ್ಬ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ನ ಚಾಲಕ ನಾಡಗೌಡ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೊಬ್ಬ ಪ್ರಯಾಣಿಕ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆ, ದಾವಣಗೆರೆ ಜಿಲ್ಲಾಸ್ಪತ್ರೆ ಹಾಗೂ ಬಳ್ಳಾರಿ ವಿಮ್ಸ್‍ಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಸುಹಾಸ್ ಬಸ್ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ-150ರಲ್ಲಿ ಬಿಜಿ ಕೆರೆ ಬಳಿ ನಿಂತಿದ್ದ ಲಾರಿಗೆ ಬಸ್ ಅಪ್ಪಳಿಸಿದೆ. ಲಾರಿ ಚಾಲಕನು ಗಾಯಗೊಂಡಿದ್ದು, ಅವರನ್ನು ಕೂಡ ಮೊಳಕಾಲ್ಮುರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊಳಕಾಲ್ಮುರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin