ಬಿಜೆಪಿ ಮುಖಂಡರನ್ನು ಭೇಟಿಯಾದ ರಜಿನಿ, ತಮಿಳುನಾಡು ರಾಜಕೀಯದಲ್ಲಿ ಸಂಚಲನ

ಈ ಸುದ್ದಿಯನ್ನು ಶೇರ್ ಮಾಡಿ

Rajnikanrt--01

ಚೆನ್ನೈ ಆ.7-ರಾಜಕೀಯ ಸೇರುವುದಾಗಿ ಕೆಲವು ದಿನಗಳ ಹಿಂದಷ್ಟೇ ಪ್ರಕಟಿಸಿ ಭಾರೀ ಸಂಚಲನ ಸೃಷ್ಟಿಸಿದ್ದ ಸೂಪರ್‍ಸ್ಟಾರ್ ರಜನಿಕಾಂತ್ ಇಂದು ಚೆನ್ನೈನಲ್ಲಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಿರುವುದು ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈನಲ್ಲಿಂದು ಬಿಜೆಪಿ ಸಂಸದೆ ಪೂನಮ್ ಮಹಾಜನ್ ಮತ್ತು ಇತರ ನಾಯಕರನ್ನು ತಲೈವಾ ರಜನಿ ಭೇಟಿ ಮಾಡಿದರು. ಇದರೊಂದಿಗೆ ತಮಿಳುನಾಡು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ.

ದೈವಿಚ್ಛೆಯಂತೆ ಸೂಕ್ತ ಸಮಯ ಬಂದಾಗ ರಾಜಕೀಯ ರಂಗ ಪ್ರವೇಶಿಸುವುದಾಗಿ ಘೋಷಿಸಿದ್ದ ರಜನಿ, ಆದಾದನಂತರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದು ಭಾರೀ ಸುದ್ದಿಯಾಗಿತ್ತು. ಈಗ ಬಿಜೆಪಿ ಸಂಸದರ ನಿಯೋಗವನ್ನು ರಜನಿ ಭೇಟಿ ಮಾಡಿರುವುದರಿಂದ ಕೇಸರಿ ಪಕ್ಷಕ್ಕೆ ಅವರು ಸೇರ್ಪಡೆಯಾಗಲಿದ್ದಾರೆಯೇ ಎಂಬ ಸುದ್ದಿಗೆ ಮತ್ತಷ್ಟು ರಂಗು ಬಂದಿದೆ.

ಚೆನ್ನೈನಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲೂ ಹಾಗೂ ಮಾಧ್ಯಮಗಳು ಅವರನ್ನು ಪದೇ ಪದೇ ಪ್ರಶ್ನಿಸಿದಾಗಲೂ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಸ್ಪಷ್ಟ ಉತ್ತರ ನೀಡದೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡುತ್ತಿದ್ದ ರಜನಿ ಈಗಾಗಲೇ ದಕ್ಷಿಣ ಭಾರತದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಹಲವಾರು ರಾಜಕೀಯ ತಂತ್ರಗಳನ್ನು ರೂಪಿಸುತ್ತಿರುವ ಈಗ ತಮಿಳುನಾಡಿನಲ್ಲಿ ಸೂಪರ್‍ಸ್ಟಾರ್ ರಜನಿಯನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ತುದಿಗಾಲಲ್ಲಿ ನಿಂತಿವೆ. ಕಳೆದ ಒಂದು ವರ್ಷದಿಂದಲೂ ಈ ಪ್ರಕ್ರಿಯೆ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ.

ಮತ್ತೊಬ್ಬ ಸೂಪರ್‍ಸ್ಟಾರ್ ಕಮಲ್‍ಹಾಸನ್ ಕೂಡ ರಾಜಕೀಯ ಪ್ರವೇಶಿಸುವ ಬಗ್ಗೆ ಮುನ್ಸೂಚನೆ ನೀಡಿದ್ದು, ಈಗಾಗಲೇ ಆಡಳಿತಾರೂಢ ಅಣ್ಣಾ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಹಿರಂಗ ಸಮರ ಸಾರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ತಮ್ಮ ರಾಜಕೀಯ ಭವಿಷ್ಯದ ಮುಂದಿನ ನಡೆ ಬಗ್ಗೆ ಸೂಕ್ಷ್ಮ ಮುನ್ಸೂಚನೆ ನೀಡಿದ್ದಾರೆ.  ಒಟ್ಟಾರೆ ತಮಿಳುನಾಡಿನಲ್ಲಿ ಇಬ್ಬರು ಸೂಪರ್‍ಸ್ಟಾರ್‍ಗಳ ನಡುವೆ ಮುಂದಿನ ರಾಜಕೀಯ ನಡೆ ಬಗ್ಗೆ ಅಭಿಮಾನಿಗಳಲ್ಲಿ ಅಪಾರ ಕುತೂಹಲ ಮತ್ತು ನಿರೀಕ್ಷೆ ಕೆರಳಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin