ಕೋರ್ಟ್ ಆವರಣದಲ್ಲಿ ಫೈರಿಂಗ್ : ಭೀಮಾತೀರ ಹಂತಕ ಬಾಗಪ್ಪ ಹರಿಜನ್ ಹತ್ಯೆ ಸಂಚು

ಈ ಸುದ್ದಿಯನ್ನು ಶೇರ್ ಮಾಡಿ

Firing-Belagavi--01

ವಿಜಯಪುರ,ಆ.08- ಬೆಳ್ಳಂಬೆಳಗ್ಗೆ ನ್ಯಾಯಾಲಯದ ಆವರಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿರುವುದು ಇಡೀ ನಗರ ಬೆಚ್ಚಿ ಬೀಳುವಂತೆ ಮಾಡಿದೆ. ದಾಳಿಗೊಳಗಾದ ಬಾಗಪ್ಪ ಹರಿಜನ್ ಸ್ಥಿತಿ ಗಂಭೀರವಾಗಿದೆ. ಕೊಲೆ, ಸುಲಿಗೆ ಸೇರಿದಂತೆ ಸುಮಾರು 10 ಪ್ರಕರಣಗಳಲಿ ಭಾಗಿ ಯಾಗಿದ್ದ ಭೀಮಾ ತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ್ ಇಂದು ಕೊಲೆ ಪ್ರಕರಣವೊಂದರಲ್ಲಿ ವಿಚಾರಣೆಗೆಂದು ಕೋರ್ಟಿಗೆ ಆಗಮಿಸಿದ್ದ ವೇಳೆ ಅಪರಿಚಿತ ವ್ಯಕ್ತಿ ಬಾಗಪ್ಪನ ಮೇಲೆ ಗುಂಡು ಹಾರಿಸಿದ್ದಾನೆ.

ತೀವ್ರವಾಗಿ ಗಾಯಗೊಂಡಿರುವ ಬಾಗಪ್ಪ ಹರಿಜನ್‍ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಬಾಗಪ್ಪನನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಅವನ ದೇಹದಲ್ಲಿ ಮೂರಕ್ಕೂ ಹೆಚ್ಚು ಗುಂಡುಗಳು ಹೊಕ್ಕಿರುವ ಸಾಧುತೆ ಇದೆ. ಗುಂಡುಗಳನ್ನು ಹೊರತೆಗೆದು ಅವನನ್ನು ಉಳಿಸಿಕೊಳ್ಳುವ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ. ಈಗಲೇ ಏನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಜಲನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬಸವರಾಜ್ ಹರಿಜನ್ ಎಂಬುವನ ಕೊಲೆ ಪ್ರಕರಣದಲ್ಲಿ ಬಾಗಪ್ಪ ಹರಿಜನ್ ಇಂದು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಬೇಕಾಗಿತ್ತು. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಒಟ್ಟು ಹತ್ತು ಪ್ರಕರಣಗಳ ಪೈಕಿ 7ರಲ್ಲಿ ಬಾಗಪ್ಪ ಖುಲಾಸೆಯಾಗಿದ್ದಾನೆ. ಇನ್ನು ಮೂರು ಪ್ರಕರಣಗಳು ಬಾಕಿ ಇವೆ.
ಗುಂಡು ಹಾರಿಸಿ ಬಾಗಪ್ಪ ಹರಿಜನ್ ಹತ್ಯೆಗೆ ಯತ್ನಿಸಿದ ಅಪರಿಚಿತ ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ತೀವ್ರ ಶೋಧಕಾರ್ಯ ನಡೆದಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Facebook Comments

Sri Raghav

Admin