ಬೆಳ್ಳಂದೂರು ಕೆರೆ ಮಾಲಿನ್ಯ ಪ್ರಕರಣ : ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದ ಸುಪ್ರೀಂ

Bellanduru--01

ನವದೆಹಲಿ, ಆ.8- ನೊರೆ ಮತ್ತು ಬೆಂಕಿಯಿಂದಾಗಿ ದೇಶಾದ್ಯಂತ ಸುದ್ದಿಯಾಗಿದ್ದ ಬೆಳ್ಳಂದೂರು ಕೆರೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮುಂದುವರಿಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್‍ಜಿಟಿ) ತಡೆಯಾಜ್ಞೆ ನೀಡಿದ್ದ ಕರ್ನಾಟಕ ಹೈಕೋರ್ಟ್‍ಗೆ ಸುಪ್ರೀಂಕೋರ್ಟ್‍ನಲ್ಲಿ ಹಿನ್ನಡೆಯಾಗಿದೆ.  ಎನ್‍ಜಿಟಿ ವಿಚಾರಣೆಗೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿದೆ. ಇದರಿಂದಾಗಿ ಬೆಳ್ಳಂದೂರು ಕೆರೆ ಮಾಲಿನ್ಯ ಪ್ರಕರಣದ ವಿಚಾರಣೆ ಮತ್ತೆ ನ್ಯಾಯಮಂಡಳಿಯಲ್ಲಿ ಮುಂದುವರಿಯುವಂತಾಗಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್. ರೋಹಿಂಗ್ಟನ್ ನಾರಿಮನ್ ಮತ್ತು ಕಿಶನ್ ಕೌಲ್ ಅವರನ್ನು ಒಳಗೊಂಡ ಪೀಠ, ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಪಟ್ಟ ವಿಷಯದಲ್ಲಿ ವಿಚಾರಣೆಗೆ ತಡೆಯಾಜ್ಞೆ ನೀಡುವುದು ಸೂಕ್ತವಾದುದಲ್ಲ. ಈ ಬಗ್ಗೆ ಎನ್‍ಜಿಟಿ ಸರಿಯಾದ ರೀತಿಯಲ್ಲಿಯೇ ವಿಚಾರಣೆ ನಡೆಸುತ್ತಿತ್ತು ಎಂದು ಹೇಳಿ ಹೈಕೋರ್ಟ್ ಆದೇಶವನ್ನು ವಜಾಗೊಳಿಸಿತು.

Facebook Comments

Sri Raghav

Admin