ಅಮಿತ್ ಷಾ, ಸ್ಮೃತಿ ಇರಾನಿಗೆ ಮೋದಿ ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ

Amith-Shah--01

ನವದೆಹಲಿ, ಆ.9-ಗುಜರಾತ್‍ನಿಂದ ರಾಜ್ಯಸಭೆಗೆ ಚುನಾಯಿತರಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಜವಳಿ ಸಚಿವೆ ಸ್ಮೃತಿ ಇರಾನಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.  ಪ್ರಥಮ ಬಾರಿಗೆ ರಾಜ್ಯಸಭೆ ಪ್ರವೇಶಿಸುತ್ತಿರುವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಅಮಿತ್ ಷಾ ಅವರಿಗೆ ಟ್ವೀಟರ್‍ನಲ್ಲಿ ಮೋದಿ ಅಭಿನಂದಿಸಿದ್ದಾರೆ. ನನ್ನ ಸಂಪುಟ ಸಹೋದ್ಯೋಗಿಯಾಗಿರುವ ಸ್ಮತಿ ಇರಾನಿ ಸಂಸತ್ತಿನ ಮೇಲ್ಮನೆಗೆ ಪುನರಾಯ್ಕೆ ಆಗಿರುವುದು ಸಂತಸ ತಂದಿದೆ ಎಂದು ಮೋದಿ ಹೇಳಿದ್ದಾರೆ.

Facebook Comments

Sri Raghav

Admin