ಕೇಂದ್ರದ ಮಾಜಿ ಸಚಿವ, ಸಂಸದ ಸನ್ವರ್ ಲಾಲ್ ಜಾಟ್ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

Sanwar-Lal-Jat

ನವದೆಹಲಿ, ಆ.9-ಕೇಂದ್ರದ ಮಾಜಿ ಸಚಿವ ಹಾಗೂ ಅಜ್ಮೀರ್ ಸಂಸದ ಸನ್ವರ್ ಲಾಲ್ ಜಾಟ್ ಇಂದು ಬೆಳಗ್ಗೆ ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಕೆಲಕಾಲ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 6.15ರಲ್ಲಿ ಜಾಟ್ ನಿಧನರಾದರು ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ(ಎಐಐಎಂಎಸ್) ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೃದಯಾಘಾತಕ್ಕೆ ಒಳಗಾಗಿ ಮೆದುಳು ಹಾನಿಗೊಂಡಿದ್ದ ಅವರನ್ನು ವೆಂಟಿಲೇಟರ್ ವ್ಯವಸ್ಥೆಯಲ್ಲಿ ಇಡಲಾಗಿತ್ತು ಎಂದು ಏಮ್ಸ್‍ನ ವೈದ್ಯರು ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಅವರು ಜಲ ಸಂಪನ್ಮೂಲ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಜಾಟ್ ನಿಧನಕ್ಕೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin