ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಸಜೆ

ಚಿಕ್ಕಮಗಳೂರು, ಆ.09- ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಗೆ 10 ವರ್ಷ ಸಜೆ, 1 ಲಕ್ಷ ರೂ. ದಂಡವನ್ನು ಜಿಲ್ಲಾ ಸೆಷನ್ಸ್ ಕೋರ್ಟ್‍ವಿಧಿಸಿದೆ. ಇಮ್ರಾನ್ ಶಿಕ್ಷಗೊಳಗಾದ ಆರೋಪಿ. ಪ್ರಕರಣ ವಿಚಾರಣೆ ನಡೆಸಿದ ನ್ಯಾ.ಕಂಬೇಗೌಡ, ಆರೋಪಿಯು ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 2 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು. ದಂಡದ ಮೊತ್ತದಲ್ಲಿ 50 ಸಾವಿರ ರೂ. ಬಾಲಕಿಗೆ ಪರಿಹಾರ ನೀಡಬೇಕು ಎಂದು ಆದೇಶ ಮಾಡಿದೆ.

ಪ್ರಕರಣ ಹಿನ್ನೆಲೆ:

ನಗರದ ನಿವಾಸಿ ಇಮ್ರಾನ್ 15 ವರ್ಷದ ಬಾಲಕಿಯನ್ನು ಓದುವುದನ್ನು ಕಲಿಸುತ್ತೇನೆ ಎಂದು ಪುಸಲಾಯಿಸಿ, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜ್ಞಾನದಾಳು ಗ್ರಾಮಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ಬಾಲಕಿಯ ಪೋಷಕರು ನಗರ ಠಾಣೆಗೆ ದೂರು ನೀಡಿದ್ದರು.
ದೂರಿನ ಮೇರೆಗೆ ಪೊಲೀಸರು ಕೋರ್ಟಿಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ನಾಗರಾಜ್ ಬಾಲಕಿಯ ಪರವಾಗಿ ವಾದ ಮಂಡಿಸಿದರು.

Facebook Comments

Sri Raghav

Admin