ಮತೀಯ ಶಕ್ತಿಗಳ ವಿರುದ್ಧ ಹೋರಾಟಕ್ಕೆ ಸೋನಿಯಾ ಕರೆ

Soniya-Gandhi--01

ನವದೆಹಲಿ, ಆ.9- ಜಾತ್ಯತೀತತೆ ಮತ್ತು ವಾಕ್ ಸ್ವಾತಂತ್ರ್ಯವು ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ದೇಶಕ್ಕೆ ಲಭಿಸಿರುವ ಸ್ವಾತಂತ್ರ್ಯವನ್ನು ರಕ್ಷಿಸಬೇಕಾದರೆ ಅದಕ್ಕೆ ಅಪಾಯಕಾರಿಯಾದ ಶಕ್ತಿಗಳನ್ನು ಮಣಿಸಲೇಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.
ಕ್ವಿಟ್ ಇಂಡಿಯಾ ಚಳವಳಿಯ 75ನೇ ವರ್ಷಾಚರಣೆ ಅಂಗವಾಗಿ ಸಂಸತ್ತಿನಲ್ಲಿ ಇಂದು ನಡೆದ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡಿದ ಅವರು ಪರೋಕ್ಷವಾಗಿ ಆರ್‍ಎಸ್‍ಎಸ್‍ಅನ್ನು ತರಾಟೆಗೆ ತೆಗೆದುಕೊಂಡರು. ಜಾತ್ಯತೀತತೆಗೆ ಧಕ್ಕೆ ಉಂಟು ಮಾಡುತ್ತಿರುವ ಮತೀಯ ಶಕ್ತಿಗಳು ಯಶಸ್ವಿಯಾಗಲು ನಾವು ಅವಕಾಶ ನೀಡಬಾರದು ಎಂದು ಸೋನಿಯಾ ನುಡಿದರು.

ದೇಶದಲ್ಲಿ ಕರಾಳ ಶಕ್ತಿಗಳು ಮತ್ತೆ ತಲೆ ಎತ್ತಿವೆಯೇ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶಗೊಳಿಸಲು ಈ ಶಕ್ತಿಗಳು ಹವಣಿಸುತ್ತಿವೆಯೇ ಎಂಬ ಪ್ರಶ್ನೆಗಳು ಉದ್ಭವಿಸುತ್ತಿವೆ. ಇಂಥ ಶಕ್ತಿಗಳು ಇದರಲ್ಲಿ ಯಶಸ್ಸು ಸಾಧಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸೋನಿಯಾ ಆರ್‍ಎಸ್‍ಎಸ್ ಮತ್ತು ಬಿಜೆಪಿ ಹೆಸರನ್ನು ಪ್ರಸ್ತಾಪಿಸಿದೇ ವಾಗ್ದಾಳಿ ನಡೆಸಿದರು.

Facebook Comments

Sri Raghav

Admin