ರಾಜಕಾರಣದ ಬಗ್ಗೆ ಮಾತನಾಡಲ್ಲ : ನಿಯೋಜಿತ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

ಈ ಸುದ್ದಿಯನ್ನು ಶೇರ್ ಮಾಡಿ

Venkayya-Naidu--01

ಹೈದರಾಬಾದ್, ಆ.9- ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂದು ನಿಯೋಜಿತ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ತಿಳಿಸಿದರು. ನಾನು ಹೊಸ ಜವಾಬ್ದಾರಿ ವಹಿಸಿಕೊಂಡಿದ್ದು, ಅತ್ಯುತ್ತಮ ಹುದ್ದೆಯಲ್ಲಿರುವಾಗ ಎಂದಿಗೂ ರಾಜಕಾರಣ, ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು. ಮಾಜಿ ರಾಷ್ಟ್ರಪತಿಗಳಾದ ಎಸ್.ರಾಧಾಕೃಷ್ಣನ್ ಮತ್ತು ಝಾಕೀರ್ ಹುಸೇನ್ ಅವರ ಆಡಳಿತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಅವರಂತೆ ನಾನು ಕೆಲಸ ಮಾಡುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯಸಭೆಯಲ್ಲಿ ಆಡಳಿತ ಪಕ್ಷದ ನಾಯಕರು ಸೇರಿದಂತೆ ವಿವಿಧ ಪಕ್ಷಗಳ ಪ್ರತಿಯೊಬ್ಬ ಸದಸ್ಯರುಗಳಿಗೆ ಮಾತನಾಡಲು ಅವಕಾಶ ಸಿಗಬೇಕು. ಪರಿಸರಕ್ಕೆ ಸಂಬಂಧಿಸಿದ ಬಿಲ್ ಅಂಗೀಕಾರವಾಗಬೇಕು. ದೇಶದಲ್ಲಿ ಬಡತನ, ಅನಕ್ಷರತೆ, ಆರ್ಥಿಕ ಸಮಸ್ಯೆಗಳು, ವಿವಿಧ ಕ್ಷೇತ್ರಗಳಲ್ಲಿರುವ ತಾರತಮ್ಯತೆ, ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯುವಂತೆ ಗಮನ ಹರಿಸಲಾಗುವುದು ಎಂದರು.  ಸಾರ್ವಜನಿಕ ಜೀವನದಲ್ಲಿ ಯಶಸ್ವಿಯಾಗಲು ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

 

Facebook Comments

Sri Raghav

Admin