ಸಿದ್ದಗಂಗಾ ಮಠದ ಶ್ರೀಗಳಿಗೆ ಭಾರತರತ್ನ ನೀಡಲು ಕೇಂದ್ರಕ್ಕೆ ಶಿಫಾರಸು

Siddaganga-Swamiji--01

ಬೆಂಗಳೂರು,ಆ.9-ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀಗಳ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುತ್ತಮ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹಿಸಿರುವ ಶ್ರೀಗಳ ಭಕ್ತರು, ನಾಯಕರಿಗೆ ನಮ್ಮ ಬೆಂಬಲವಿದೆ ಎಂದಿದ್ದಾರೆ.

Facebook Comments

Sri Raghav

Admin