ಜಂತಕಲ್ ಮೈನಿಂಗ್‍ ಪ್ರಕರಣ : ಹೈಕೋರ್ಟ್’ನಿಂದ ಹೆಚ್‍ಡಿಕೆಗೆ ಷರತ್ತುಬದ್ಧ ಜಾಮೀನು

Kumaraswamy

ಬೆಂಗಳೂರು, ಆ.10-ಜಂತಕಲ್ ಮೈನಿಂಗ್‍ಗೆ ಪರವಾನಗಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಮನವಿ ಪುರಸ್ಕರಿಸಿದ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದ್ದು, ಎರಡು ವಾರಕ್ಕೊಮ್ಮೆ ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಂತಕಲ್ ಕಂಪೆನಿಗೆ ಮೈನಿಂಗ್‍ಗೆ ಅವಕಾಶ ನೀಡಿದ್ದರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ಸಂಬಂಧ ಕುಮಾರಸ್ವಾಮಿಯವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೆಳಹಂತದ ನ್ಯಾಯಾಲಯದ ವಜಾಗೊಳಿಸಿತ್ತು. ಇದನ್ನು ಆಕ್ಷೇಪಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇವರ ಮನವಿ ಮಾನ್ಯ ಮಾಡಿರುವ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Facebook Comments

Sri Raghav

Admin