ರಜೆ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿಯಿಂದ ಹೆಚ್ಚುವರಿ ಬಸ್ ಸೇವೆ

ಈ ಸುದ್ದಿಯನ್ನು ಶೇರ್ ಮಾಡಿ

KSRTC--01

ಬೆಂಗಳೂರು, ಆ.10- ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಾರ್ವತ್ರಿಕ ರಜೆ ಹಿನ್ನೆಲೆಯಲ್ಲಿ ನಾಳೆ ಮತ್ತು 12ರಂದು 450 ರಿಂದ 500 ಹೆಚ್ಚುವರಿ ಬಸ್‍ಗಳು ಹಾಗೂ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು 15ರಂದು ವಿಶೇಷ ಕೆಎಸ್‍ಆರ್‍ಟಿಸಿ ವಾಹನಗಳು ಕಾರ್ಯಾಚರಣೆ ನಡೆಸಲಿವೆ. 15ರಂದು ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಶಿರಸಿ, ಬಳ್ಳಾರಿ, ತಿರುಪತಿ ಸೇರಿದಂತೆ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‍ಗಳು ಸಂಚರಿಸಲಿವೆ.

ಮೈಸೂರು ರಸ್ತೆಯ ಸ್ಯಾಟ್‍ಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಮಡಿಕೇರಿ, ಕುಶಾಲನಗರ, ಕೊಡಗು ಮಾರ್ಗದ ಬಸ್‍ಗಳು ಸಂಚರಿಸಲಿದ್ದು, ಮಧುರೆ, ತಮಿಳುನಾಡು, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ತೆರಳುವ ಐಷಾರಾಮಿ ಬಸ್‍ಗಳು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿವೆ.

ವಿಜಯನಗರ, ಜೆಪಿ ನಗರ, ಜಯನಗರ 4ನೆ ಹಂತ, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ, ಕೆಂಗೇರಿ ಉಪನಗರದಿಂದ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಶಿವಮೊಗ್ಗ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಬೆಂಗಳೂರಿನಲ್ಲಿ 171, ಮೈಸೂರಿನಲ್ಲಿ 17, ಮಂಗಳೂರಿನಲ್ಲಿ 35 ಹಾಗೂ ರಾಜ್ಯದ ಇತರೆ ಸ್ಥಳಗಳಲ್ಲಿರುವ 230 ಗಣಕೀಕೃತ ಬುಕ್ಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಹಾಗೂ ಬರುವ ಪ್ರಯಾಣದ ಟಿಕÉಟ್‍ಗಳನ್ನು ಒಟ್ಟಿಗೆ ಕಾಯ್ದಿರಿಸಿದೆ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Facebook Comments

Sri Raghav

Admin