ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ಶಾಕ್ ಕೊಟ್ಟ ಯೋಗಿ ಆದಿತ್ಯಾನಾಥ್

ಈ ಸುದ್ದಿಯನ್ನು ಶೇರ್ ಮಾಡಿ

Yogi-Adityanath--01

ಮಹಾರಾಜಗಂಜ್,ಆ.11- ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಉತ್ತರಪ್ರದೇಶ ರಾಜ್ಯ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಕಠಿಣ ಕ್ರಮ ಕೈಗೊಂಡಿದ್ದು, 11 ಅಧಿಕಾರಿಗಳಿಗೆ ಅಮಾನತು ಮಾಡಿದ್ದಾರೆಂದು ತಿಳಿದುಬಂದಿದೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ 11 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದ್ದು, 7 ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸಿಎಂ ಯೋಗಿ ಆದಿತ್ಯನಾಥ ಸೂಚಿಸಿದ್ದಾರೆ ಎಂದು ಉತ್ತರಪ್ರದೇಶ ರಾಜ್ಯ ಸರ್ಕಾರದ ವಕ್ತಾರ ಮಾಹಿತಿ ನೀಡಿದ್ದಾರೆ.

ಪುರಾಂದರ್ಪುರ್ ಮತ್ತು ಫರೆಂದ ಪೊಲೀಸ್ ಠಾಣಾಧಿಕಾರಿಗಳು ಸೇರಿದಂತೆ ನೈತಂತ್ವದ ಉಪ-ವಿಭಾಗಿಯ ಮ್ಯಾಜಿಸ್ಟ್ರೆಟ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.  ಸಾರ್ವಜನಿಕರ ಸಮಸ್ಯೆಗಳ ಕುರಿತಂತೆ ಕೆಲ ದಿನಗಳ ಹಿಂದಷ್ಟೇ ಸಿಎಂ ಯೋಗಿ ಆದಿತ್ಯನಾಥ್ಅವರು ಸಭೆಯೊಂದನ್ನು ನಡೆಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದರು. ಸಭೆಯಲ್ಲಿ ಸಾರ್ವಜನಿಕ ಸಮಸ್ಯೆಗಳ ಕುರಿತಂತೆ ಅಧಿಕಾರಿಗಳ ಪ್ರತಿಕ್ರಿಯೆಗಳನ್ನು ಕೇಳಿದ್ದರು.
ಸಭೆಯಲ್ಲಿ ಅಧಿಕಾರಿಗಳಿಗೆ ಯೋಗಿ ಆದಿತ್ಯನಾಥ್, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಕಿವಿಕೊಡದೆ ಇರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದರು.

ಆಸ್ಪತ್ರೆಗಳಲ್ಲಿ ವೈದ್ಯರು ದೀರ್ಘಕಾಲಿಕ ಗೈರು ಹಾಜರಾಗುತ್ತಿರುವ ವಿಚಾರ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಎಂ ಯೋಗಿ ಆದಿತ್ಯನಾಥï, ವೈದ್ಯರ ವಿರುದ್ದ ದಾಖಲಾಗಿರುವ ದೂರುಗಳು ಸತ್ಯವೆಂದು ತಿಳಿದುಬಂದಿದ್ದೇ ಆದರೆ, ವೈದ್ಯರು ನಾಲ್ಕು ತಿಂಗಳ ವೇತನವನ್ನು ಕಡಿತಗೊಳಿಸಲಾಗುತ್ತದೆ ಎಂದಿದ್ದರು.  ಸಾರ್ವಜನಿಕರ ಸಮಸ್ಯೆಗಳ ಕುರಿತಂತೆ ನಿರ್ಲಕ್ಷ್ಯ ತೋರಿಸುವುದನ್ನು ಸಹಿಸಲು ಅಸಾಧ್ಯವಾದದ್ದು. ಎಚ್ಚರಿಕೆಗಳ ನಡುವೆಯೂ ಯಾರು ತಮ್ಮ ನಡವಳಿಕೆಗಳನ್ನು ಸರಿಪಡಿಸಿಕೊಳ್ಳುವುದಿಲ್ಲವೋ, ಯಾರು ತಮ್ಮ ಭ್ರಷ್ಟಾಚಾರಗಳನ್ನು ಮುಂದುವರೆಸುತ್ತಾರೆಯೋ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.

Facebook Comments

Sri Raghav

Admin