ಕುಡಿದ ಮತ್ತಿನಲ್ಲಿ ಗುಂಡು ಹಾರಿಸಿದ

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯಪುರ,ಆ.11- ಬೀಮಾ ತೀರದ ಹಂತಕ ಬಾಗಪ್ಪ ಹರಿಜನ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣ ಮಾಸುವ ಮುನ್ನವೇ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪಿಸ್ತೂಲ್‍ನಿಂದ ಗುಂಡು ಹಾರಿಸಿರುವ ಘಟನೆ ಇಂಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ಕಲ್ಲಪ್ಪ ಬಡಚಿ ತನ್ನ ಪಿಸ್ತೂಲ್‍ನಿಂದ ಗುಂಡು ಹಾರಿಸಿದ್ದು, ಕಳೆದ ರಾತ್ರಿ ಬಂದೆನ ವಾಜ್ ಜಾತ್ರೆ ನಡೆಯುತ್ತಿದ್ದ ವೇಳೆ ಕಂಠಪೂರ್ತಿ ಕುಡಿದಿದ್ದ ಕಲ್ಲಪ್ಪ ಬಡಚಿ ಲೈಸೆನ್ಸ್ ಹೊಂದಿದ್ದ ಪಿಸ್ತೂಲ್‍ನಿಂದ ಗಾಳಿಯಲ್ಲಿ ಎರಡು ಸುತ್ತಿ ಗುಂಡು ಹಾರಿಸಿದ್ದಾನೆ.

ಗುಂಡಿನ ಶಬ್ದಕ್ಕೆ ಜಾತ್ರೆಯಲ್ಲಿದ್ದ ಜನರು ಭಯಭೀತರಾದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಕಲ್ಲಪ್ಪ ಬಡಚಿಅವರನ್ನು ಬಂಧಿಸಿ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಯಿತು. ಅದೃಷ್ಟಾವಶತ್ ಯಾವುದೆ ಪ್ರಾಣಪಾಯ ಸಂಭವಿಸಿಲ್ಲ.

Facebook Comments

Sri Raghav

Admin