13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಪದಗ್ರಹಣ

ಈ ಸುದ್ದಿಯನ್ನು ಶೇರ್ ಮಾಡಿ

Venkaiah-Naidu--01

ನವದೆಹಲಿ, ಆ.11- ಭಾರತದ 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್‍ಕೋವಿಂದ್ ಅವರು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಪ್ರಮಾಣವಚನ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮೀತ್ ಶಾ, ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಹಾಜರಿದ್ದರು.

Venkaiaha--01

ಪ್ರಮಾಣವಚನ ಸ್ವೀಕರಿಸಿ ಮಾತನಾಡಿದ ವೆಂಕಯ್ಯನಾಯ್ಡು, ಈ ಹುದ್ದೆಯ ಗೌರವವನ್ನು ಎತ್ತಿಹಿಡಿಯಲು ಶ್ರಮಿಸುವುದಾಗಿ ನುಡಿದರು. ಆ.5ರಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿ ವೆಂಕಯ್ಯನಾಯ್ಡು, ಯುಪಿಎ ಉಮೇದುವಾರ, ರಾಷ್ಟ್ರಪಿತ ಮಹಾತ್ಮಾಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರನ್ನು ಪರಾಭವಗೊಳಿಸಿ ಚುನಾಯಿತರಾಗಿದ್ದರು.

Delhi: Vice President designate @MVenkaiahNaidu pays tribute to Sardar Vallabhbhai Patel at Patel Chowk
Delhi: Vice President designate @MVenkaiahNaidu pays tribute to Sardar Vallabhbhai Patel at Patel Chowk
Facebook Comments

Sri Raghav

Admin