ಆಮ್ಲಜನಕದ ಕೊರತೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 63ಕ್ಕೆ ಏರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

UP-Oxygen--01

ಗೋರಖ್‍ಪುರ, ಆ.12- ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಸ್ವಕ್ಷೇತ್ರ ಗೋರಖ್‍ಪುರದಲ್ಲಿರುವ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜಿನಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟ ಮಕ್ಕಳ ಸಂಖ್ಯೆ 63ಕ್ಕೇರಿದ್ದು, ದೇಶಾದ್ಯಂತ ತೀವ್ರ ಆತಂಕ ಉಂಟುಮಾಡಿದೆ. ಈ ಮಕ್ಕಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಯೋಗಿ ಆದಿತ್ಯನಾಥ್, ತುರ್ತುಸಭೆ ನಡೆಸಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Facebook Comments

Sri Raghav

Admin