ಕನ್ನಡ ಬಾವುಟ ಬದಲಾಯಿಸಿದರೆ ದೊಡ್ಡ ಕ್ರಾಂತಿಯೇ ಆಗುತ್ತದೆ : ವಾಟಾಳ್ ವಾರ್ನಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

Vatal-Nagaraj--Kannada-Flag

ಬೆಂಗಳೂರು, ಆ.12-ಒಂದು ವೇಳೆ ರಾಜ್ಯಸರ್ಕಾರ ಕನ್ನಡ ಬಾವುಟ ಬದಲಾಯಿಸಿದರೆ ದೊಡ್ಡ ಕ್ರಾಂತಿಯೇ ಆಗುತ್ತದೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಗುಡುಗಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಹಳದಿ-ಕೆಂಪು ಬಣ್ಣದ ಬಾವುಟವನ್ನು ಬದಲಾವಣೆ ಮಾಡಬಾರದು.  ಸಾಹಿತಿಗಳು, ಕವಿಗಳು, ಬರಹಗಾರರು ಸೇರಿದಂತೆ ರಾಜ್ಯದ ಜನತೆ ಈ ಬಾವುಟವನ್ನು ಒಪ್ಪಿದ್ದಾರೆ. ಹೀಗಾಗಿ ಬಾವುಟದ ಬಣ್ಣ ಬದಲಾಯಿಸಬಾರದು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

55 ವರ್ಷಗಳಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಾ ಬಂದಿದ್ದೇನೆ. ರಾಜ್ಯದ ಯಾವುದೇ ಮೂಲೆಯಲ್ಲೂ ಕನ್ನಡ ಸಮಸ್ಯೆ ಉಂಟಾದರೆ ಅದರ ವಿರುದ್ಧ ಹೋರಾಟ ಮಾಡುತ್ತೇವೆ. ನಗರದೇವತೆ ಅಣ್ಣಮ್ಮದೇವಿಯನ್ನು ಕನ್ನಡ ತಾಯಿ ಭುವನೇಶ್ವರಿ ಅಲಂಕಾರದಲ್ಲಿ 55 ವರ್ಷಗಳಿಂದ ಮೆರವಣಿಗೆ ಮಾಡಿಕೊಂಡು ಬರುತ್ತಿದ್ದೇವೆ ಎಂದು ವಿವರಿಸಿದರು.

50 ವರ್ಷಗಳ ಬಳಿಕ ನಡೆಯುವ ಕನ್ನಡ ಬಾವುಟ ಸಮ್ಮೇಳನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್, ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್‍ಕುಮಾರ್‍ಶೆಟ್ಟಿ, ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಮಂಜುನಾಥ್‍ದೇವ್ ಹಾಗೂ ಎಚ್.ವಿ.ಗಿರೀಶ್‍ಗೌಡ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Facebook Comments

Sri Raghav

Admin