ಕರ್ನಾಟಕ ಬಿಟ್ಟು ತೊಲಗಿ ಎಂದು ಅಮಿತ್ ಷಾ ವಿರುದ್ಧ ಕರಪತ್ರ ಹಂಚಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Amit-Shah--0

ಬೆಂಗಳೂರು, ಆ.12-ಗುಜರಾತ್‍ನಲ್ಲಿ ರಾಜ್ಯಸಭಾ ಚುನಾವಣೆ ವೇಳೆ ಶಾಸಕರ ಖರೀದಿಗೆ ತೊಡಗಿ ಮುಖಭಂಗ ಅನುಭವಿಸಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ ನೀವು ಕರ್ನಾಟಕ ಬಿಟ್ಟು ತೊಲಗಿ ಎಂದು ಕೆಲ ಸಂಘಟನೆಗಳು ಇಂದು ಕರಪತ್ರಗಳನ್ನು ಹಂಚಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಷಾ ರಾಜ್ಯಕ್ಕೆ ಮೂರು ದಿನ ಭೇಟಿಗೆ ಆಗಮಿಸುತ್ತಿದ್ದಂತೆ ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆಯಲ್ಲಿ ಕೆಲ ಸಂಘಟನೆಗಳ ಕಾರ್ಯಕರ್ತರು ಕರಪತ್ರಗಳನ್ನು ಹಂಚಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಐಟಿ ಹಾಗೂ ಸಿಬಿಐ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಭ್ರಷ್ಟಾಚಾರ ಎಲ್ಲರಿಗೂ ತಿಳಿದು ಅವರನ್ನು ಸೋಲಿಸಲಾಯಿತು. ಈಗ ಮತ್ತೆ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ಸೇರಿದಂತೆ ಅವರ ಸಚಿವ ಸಂಪುಟದ ಹಲವಾರು ಸಚಿವರು ಜೈಲಿಗೆ ಹೋಗಿ ಅವರ ಭ್ರಷ್ಟಾಚಾರ ನಿಮಗೆ ಕಾಣುತ್ತಿಲ್ಲವೇ, ಅವರ ಅಕ್ರಮ ಸಂಪತ್ತಿನ ಬಗ್ಗೆ ಏನು ಹೇಳುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

Facebook Comments

Sri Raghav

Admin