ಜೆಡಿಎಸ್‍ನಿಂದ ಅಮಾನತುಗೊಂಡ ಶಾಸಕರು ಕಾಂಗ್ರೆಸ್‍ನಿಂದ ಸ್ಪರ್ಧಿಸೋದು ಪಕ್ಕಾ : ಜಮೀರ್

ಈ ಸುದ್ದಿಯನ್ನು ಶೇರ್ ಮಾಡಿ

Jameer-ahamad

ಬೆಂಗಳೂರು, ಆ.12-ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಅಮಾನತುಗೊಂಡಿರುವ ಏಳು ಮಂದಿ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಎಂದು ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ. ದೆಹಲಿಯಲ್ಲಿಯೇ ಅಧಿಕೃತವಾಗಿ ಕಾಂಗ್ರೆಸ್‍ಗೆ ಸೇರುತ್ತೇವೆ. ನಂತರ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಮಾಡುವುದಾಗಿ ಹೇಳಿದರು.

ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿಯವರು ಸಂಪರ್ಕದಲ್ಲಿದ್ದು ಶೀಘ್ರದಲ್ಲೇ ದೆಹಲಿಯಲ್ಲೇ ಭೇಟಿ ಮಾಡಲಿದ್ದೇವೆ. ಈಗಾಗಲೇ ಏಳು ಮಂದಿ ಶಾಸಕರಿಗೂ ಕಾಂಗ್ರೆಸ್ ಪಕ್ಷದ ಟಿಕೆಟ್ ದೊರೆಯುವುದು ಖಚಿತವಾಗಿದೆ ಎಂದರು.

ಸಂಬಂಧವಿಲ್ಲ:

ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಮಹಿಳೆಯೊಬ್ಬರು ನಾಗರಿಕರನ್ನು ವಂಚಿಸಿರುವುದು ಗಮನಕ್ಕೆ ಬಂದಿದೆ. ಆ ಮಹಿಳೆಯನ್ನು ಬಂಧಿಸಿ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದೇನೆ. ಇಂದು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಈ ಸಂಬಂಧ ದೂರು ನೀಡುವುದಾಗಿ ತಿಳಿಸಿದರು. ಆ ಮಹಿಳೆ ಯಾರೆಂಬುದೇ ನನಗೆ ಪರಿಚಯವಿಲ್ಲ. ಆಕೆ ನಮ್ಮ ಕಾರ್ಯಕರ್ತಳೂ ಅಲ್ಲ. ಇಂತಹ ವಂಚಕರ ಬಗ್ಗೆ ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದು ಸಲಹೆ ನೀಡಿದರು.

Facebook Comments

Sri Raghav

Admin