ಡಿ.ಜೆ.ಹಳ್ಳಿ ವ್ಯಾಪ್ತಿಯಲ್ಲಿ ಆ.15ರಂದು ಮದ್ಯ ಮಾರಾಟ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

Wine-Shop--01

ಬೆಂಗಳೂರು, ಆ.12- ಪೂರ್ವ ವಿಭಾಗದ ಡಿ.ಜೆ.ಹಳ್ಳಿ ವ್ಯಾಪ್ತಿಯ ದೊಡ್ಡಣ್ಣನಗರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಆ.15ರಂದು ಕಾವಡಿ ಆಡಿಕೃತಿಕ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಡಿ.ಜೆ.ಹಳ್ಳಿ ವ್ಯಾಪ್ತಿಯಲ್ಲಿನ ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿ, ಬಾರ್‍ಗಳು, ವೈನ್‍ಶಾಪ್‍ಗಳು, ಪಬ್‍ಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟವನ್ನು ಮಾಡದಂತೆ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ನಿಷೇದಾಜ್ಞೆ ವಿಧಿಸಿರುತ್ತಾರೆ.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರಿಂದ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಭಂಗ ಉಂಟುಮಾಡುವಂತಹ ಕೃತ್ಯಗಳಲ್ಲಿ ತೊಡಗುವ ಸಾಧ್ಯತೆ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ವ್ಯಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

Facebook Comments

Sri Raghav

Admin