ನಾಗಮಂಗಲದಿಂದಲೇ ಚೆಲುವರಾಯಸ್ವಾಮಿ ಸ್ಪರ್ಧೆ

ಈ ಸುದ್ದಿಯನ್ನು ಶೇರ್ ಮಾಡಿ

Chaluvarayaswamy01

ಬೆಂಗಳೂರು, ಆ.11- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ನಾಗಮಂಗಲ ಕ್ಷೇತ್ರದಿಂದಲೇ ಸ್ಪರ್ಧಿಸು ವುದಾಗಿ ಮಾಜಿ ಸಚಿವ ಎನ್.ಚಲುವರಾಯ ಸ್ವಾಮಿ ತಿಳಿಸಿದರು. ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸ್ವಕ್ಷೇತ್ರವನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಆಧಾರರಹಿತ ಎಂದು ತಳ್ಳಿ ಹಾಕಿದರು.

ಆದಿಚುಂಚನಗಿರಿ ಮಠ ನಮ್ಮ ಸಮುದಾಯದ ಪ್ರಮುಖ ಮಠವಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭೇಟಿಗೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ. ಶ್ರೀ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ನಾಯಕರು ಭೇಟಿ ನೀಡುತ್ತಾರೆ. ಈ ಮಠ ಯಾವುದೇ ಪಕ್ಷ, ಜಾತಿಗೆ ಸೀಮಿತವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಲಿಂಗಾಯತ ಧರ್ಮದ ವಿಚಾರ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಒಕ್ಕಲಿಗರಿಗೂ ಪ್ರತ್ಯೇಕ ಧರ್ಮದ ವಿಚಾರ ಪ್ರಸ್ತಾಪಿಸಿದ್ದಾರಲ್ಲ ಎಂದು ಗಮನ ಸೆಳೆದಾಗ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥಸ್ವಾಮೀಜಿಯವರು ಸೇರಿದಂತೆ ಸಮುದಾಯ ಮಠಾಧೀಶರು, ಜನಾಂಗದ ಹಿರಿಯರು, ಮುಖಂಡರು ತೀರ್ಮಾನಿಸುತ್ತಾರೆ. ಈ ಬಗ್ಗೆ ತಾವು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

Facebook Comments

Sri Raghav

Admin