ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಕಿತ್ತೊಗೆಯಲು ಕಾರ್ಯಕರ್ತರಿಗೆ ಅಮಿತ್ ಷಾ ಕರೆ

ಈ ಸುದ್ದಿಯನ್ನು ಶೇರ್ ಮಾಡಿ

Amit-Shah--01

ಬೆಂಗಳೂರು, ಆ.12-ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಅನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಅಮಿತ್ ಷಾ ಕಾರ್ಯಕರ್ತರಿಗೆ ಕರೆ ನೀಡಿದರು. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಐದು ವರ್ಷದಿಂದ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ. ಅದನ್ನು ಬುಡಸಹಿತ ಕಿತ್ತುಹಾಕಬೇಕು. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಂಕಲ್ಪ ಮಾಡಬೇಕು ಎಂದರು.

ಮೋದಿಯವರ ಮೂರೂವರೆ ವರ್ಷಗಳ ಸಾಧನೆ, ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು.ಭ್ರಷ್ಟಾಚಾರ ರಹಿತ ಆಡಳಿತ ಹಾಗೂ ಜನಪರ, ಪಾರದರ್ಶಕ ಆಡಳಿತ ನೀಡುವುದು ನಮ್ಮ ಪಕ್ಷದ ಧ್ಯೇಯವಾಗಬೇಕು. ಪ್ರತಿಯೊಬ್ಬ ಕಾರ್ಯಕರ್ತರು ಮೋದಿಯವರ ಸಾಧನೆಗಳನ್ನು ಮನೆ, ಮನೆಗೂ ತಲುಪಿಸುವ ಕೆಲಸ ಮಾಡಬೇಕು ಎಂದು ಹೇಳಿದರು. ಕಾರ್ಯಕರ್ತರ ಮುಂದೆ ಬಹುದೊಡ್ಡ ಸವಾಲಿದೆ. ಧೈರ್ಯವಾಗಿ ತೆಗೆದುಕೊಂಡು ಮುನ್ನುಗ್ಗಿ. ಚುನಾವಣೆ ಸಮೀಪಿಸುತ್ತಿದೆ. ಈಗಿನಿಂದಲೇ ಕಾರ್ಯಪ್ರವೃತ್ತರಾಗಿ ಎಂದು ಷಾ ಸೂಚಿಸಿದರು.

Facebook Comments

Sri Raghav

Admin