ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಕೋರಿದ ವೇಣುಗೋಪಾಲ್, ಪರಮೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಬೆಂಗಳೂರು, ಆ.12- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಅವರ ನಿವಾಸ ಕಾವೇರಿಗೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪಕ್ಷದ ಉಸ್ತುವಾರಿ ವೇಣುಗೋಪಾಲ್ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದರು. ಪಕ್ಷದ ಮುಖಂಡರು, ಮುಖ್ಯಮಂತ್ರಿಗಳ ಅಭಿಮಾನಿಗಳು, ಕಾರ್ಯಕರ್ತರು ಸಾಲುಸಾಲಾಗಿ ನಿಂತು ಪುಷ್ಪಗುಚ್ಛ ನೀಡಿ ಮುಖ್ಯಮಂತ್ರಿಯವರಿಗೆ ಶುಭಾಶಯ ಕೋರಿದರು.  ನಿವಾಸದ ಸುತ್ತಮುತ್ತ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಫ್ಲಕ್ಸ್, ಬಂಟಿಂಗ್ಸ್, ಬ್ಯಾನರ್‍ಗಳನ್ನು ಕಟ್ಟಿದ್ದರು.

Facebook Comments

Sri Raghav

Admin