ಉಗ್ರರ ಅಟ್ಟಹಾಸ : ಮೂವರು ಯೋಧರು ಹುತಾತ್ಮ, ಹಲವರಿಗೆ ಗಾಯ

Kashmir--v01

ಶ್ರೀನಗರ, ಆ.13-ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರಗಾಮಿಗಳ ಅಟ್ಟಹಾಸ ಮತ್ತಷ್ಟು ಹೆಚ್ಚಾಗಿದೆ. ಶೋಪಿಯಾನ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ಕ್ಯಾಪ್ಟನ್ ಸೇರಿದಂತೆ ಕೆಲವರು ತೀವ್ರ ಗಾಯಗೊಂಡಿದ್ದಾರೆ. ಎನ್‍ಕೌಂಟರ್‍ನಲ್ಲಿ ಒಬ್ರ ಉಗ್ರನನ್ನು ಸೇನಾಪಡೆ ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳ ಮೇಲೆ ಉಗ್ರರು ನಡೆಸಿದ ಮತ್ತೊಂದು ದಾಳಿಯಲ್ಲಿ  ಇಬ್ಬರು ಯೋಧರು ತೀವ್ರ ಗಾಯಗೊಂಡಿದ್ದಾರೆ.

ಶೋಪಿಯಾನ್ ಜಿಲ್ಲೆಯ ಗ್ರಾಮವೊಂದರಲ್ಲಿ ಮೂವರು ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ರೈಫಲ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸಿಆರ್‍ಪಿಎಫ್ ಯೋಧರು ಶನಿವಾರ ರಾತ್ರಿ ಆ ಪ್ರದೇಶವನ್ನು ಸುತ್ತುವರಿದು ಶೋಧ ನಡೆಸುತ್ತಿದ್ದರು. ಸೇನಾಪಡೆ ಉಗ್ರರ ಅಡಗುತಾಣ ಸಮೀಪಿಸುತ್ತಿದ್ದಂತೆ ಭಯೋತ್ಪಾದರು ಗುಂಡಿನ ದಾಳಿ ನಡೆಸಿದರು. ತಕ್ಷಣ ಎಚ್ಚೆತ್ತ ಯೋಧರು ಪ್ರತಿ ದಾಳಿ ನಡೆಸಿದಾಗ ದೀರ್ಘ ಕಾಲ ಗುಂಡಿನ ಚಕಮಕಿ ನಡೆಯಿತು.
ಭಯೋತ್ಪಾದಕರ ಗುಂಡೇಟಿನಿಂದ ಓರ್ವ ಕ್ಯಾಪ್ಟನ್ ಸೇರಿದಂತೆ ಏಳು ಯೋಧರು ಗಾಯಗೊಂಡದು. ಬಳಿಕ ಮುವರು ಯೋಧರು ಹುತಾತ್ಮರಾದರು. ತೀವ್ರ ಗಾಯಗೊಂಡ ಇತರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಎನ್‍ಕೌಂಟರ್‍ನಲ್ಲಿ ಭಯೋತ್ಪಾದಕನೊಬ್ಬನನ್ನು ಯೋಧರು ಹೊಡೆದುರುಳಿಸಿದ್ದಾರೆ. ಆ ಪ್ರದೇಶದಲ್ಲಿ ಅವಿತಿರುವ ಇನ್ನಿಬರು ಉಗ್ರರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ.

ಉಗ್ರರ ದಾಳಿ:

ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಹಾಜಿನ್ ಪ್ರದೇಶದ ವಹಾಬ್ ಪ್ಯಾರಿ ಮೊಹಲ್ಲಾದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನಾಪಡೆ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಇನ್ನಿಬ್ಬರು ಯೋಧರು ತೀವ್ರ ಗಾಯಗೊಂಡಿದ್ದಾರೆ. ಆ ಪ್ರದೇಶದಲ್ಲಿ ಉಗ್ರರ ಬೇಟೆ ಕಾರ್ಯ ತೀವ್ರಗೊಂಡಿದೆ.
ಶೋಪಿಯಾನ್ ಜಿಲ್ಲಯ ಅವ್‍ನೀರಾ ಗ್ರಾಮದಲ್ಲಿ ನಿನ್ನೆ ಮುಂಜಾನೆ ಉಗ್ರರೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಯೋಧನೊಬ್ಬ ಹುತಾತ್ಮನಾಗಿ ಇತರ ನಾಲ್ವರು ಗಾಯಗೊಂಡಿದ್ದರು.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕಾಲಾರೂಸೆ ಅರಣ್ಯ ಪ್ರದೇಶದಲ್ಲಿ ಮೊನ್ನೆ ಮಧ್ಯರಾತ್ರಿ ಭಯೋತ್ಪಾದಕರು 42 ರಾಷ್ಟ್ರೀಯ ರೈಫಲ್ಸ್ ಶಿಬಿರದ ಮೇಲೆ ದಾಳಿ ನಡೆಸಿ ಕೆಲವು ಯೋಧರನ್ನು ಗಾಯಗೊಳಿಸಿದ್ದರು.

ಸ್ಫೋಟದಲ್ಲಿ ವ್ಯಕ್ತಿ ಸಾವು :

ಶ್ರೀನಗರದಲ್ಲಿ ನಿನ್ನೆ ನಡೆದ ಪ್ರತ್ಯೇಕತಾವಾದಿಗಳ ಪ್ರತಿಭಟನೆ ವೇಳೆ ಪೊಲೀಸರತ್ತ ಎಸೆದ ಪೆಟ್ರೋಲ್ ಬಾಂಬ್ ಸ್ಫೋಟಗೊಂಡು ತೀವ್ರ ಗಾಯಗೊಂಡಿದ್ದ ಇಮ್ತಿಯಾಜ್ ಅಹಮದ್ ಮೀರ್ ಎಂಬ ನಾಗರಿಕ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.

Facebook Comments

Sri Raghav

Admin