ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ, 18 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Pakistan--01

ಕ್ವೆಟ್ಟಾ, ಆ.13-ಪಾಕಿಸ್ತಾನದ ಕ್ವೆಟ್ಟಾ ನಗರದ ಕಿಕ್ಕಿರಿದ ಮಾರುಕಟ್ಟೆಯೊಂದರಲ್ಲಿ ಪ್ರಬಲ ಬಾಂಬ್ ಸ್ಫೋಟಗೊಂಡು ಯೋಧರೂ ಸೇರಿದಂತೆ 18 ಮಂದಿ ಮೃತಪಟ್ಟು ಅನೇಕರು ಗಾಯಗೊಂಡಿದ್ದಾರೆ.  ಬಲೂಚಿಸ್ತಾನದ ಹಿಂಸಾಚಾರ ಪೀಡಿದ ಪ್ರಾಂತ್ಯದಲ್ಲಿ ಇತ್ತೀಚೆಗೆ ನಡೆದ ಭೀಕರ ದಾಳಿ ಇದಾಗಿದೆ ಎಂದು ಪ್ರಾಂತೀಯ ಗೃಹ ಸಚಿವ ಸರ್ತಾಜ್ ಬುಗ್ದಿ ತಿಳಿಸಿದ್ದಾರೆ. ರಸ್ತೆಯಲ್ಲಿ ಸಾಗುತ್ತಿದ್ದ ಅರೆಸೇನಾ ಪಡೆಯನ್ನು ಗುರಿಯಾಗಿಟ್ಟುಕೊಂಡು ಈ ದಾಳಿ ನಡೆಸಲಾಗಿದೆ. ಈ ದಾಳಿಯ ಹಿಂದೆ ಮಧ್ಯಪ್ರಾಚ್ಯದ ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರರ ಕೈವಾಡ ಇದೆ ಎಂದು ಶಂಕಿಸಲಾಗಿದೆ.

ದಾಳಿಯಿಂದ 15 ಯೋಧರು ಹುತಾತ್ಮರಾಗಿದ್ದಾರೆ. ನಾಗರಿಕರೂ ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಮೋಟಾರ್ ಸೈಕಲ್ ಮೇಲೆ ಬಂದ ಮಾನವ ಬಾಂಬರ್ ಒಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿರುವ 40 ಜನರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

Facebook Comments

Sri Raghav

Admin