ಸ್ವಾತಂತ್ರ್ಯೋತ್ಸವಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು, ಭಾರೀ ಭದ್ರತೆ

ಈ ಸುದ್ದಿಯನ್ನು ಶೇರ್ ಮಾಡಿ

manik-Shsha--01

ಬೆಂಗಳೂರು, ಆ.13-ಎಪ್ಪಂತ್ತೊಂದನೇ ಸ್ವಾತಂತ್ರ್ಯ ದಿನಾಚರಣೆಗೆ ರಾಜಧಾನಿ ಬೆಂಗಳೂರಿನ ಮಹಾತ್ಮಗಾಂಧಿ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜುಗೊಳ್ಳುತ್ತಿದೆ. ವ್ಯಾಪಕ ಭದ್ರತೆ ಮತ್ತು ಸಿದ್ಧತೆ ನಡೆದಿದೆ. ಆ.15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪಥಸಂಚಲನ, ಗೌರವ ರಕ್ಷೆ, ಹೆಲಿಕಾಪ್ಟರ್‍ನಿಂದ ಪುಷ್ಪಾರ್ಚನೆಯ ತಾಲೀಮು ನಡೆಸಲಾಗುತ್ತಿದೆ.

ಈ ಬಗ್ಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬೆಂಗಳೂರು ಜಿಲ್ಲಾಧಿಕಾರಿ ವಿ.ಶಂಕರ್ ಪತ್ರಿಕಾಗೋಷ್ಠಿಯಲ್ಲಿ ಸಿದ್ಧತೆ ಮತ್ತು ಭದ್ರತೆಯ ವಿವರಗಳನ್ನು ನೀಡಿದರು. ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದ್ದು, ಭದ್ರತೆಗಾಗಿ 9 ಡಿಸಿಪಿ, 16 ಎಸಿಪಿ, 91 ಸಬ್‍ಇನ್ಸ್‍ಪೆಕ್ಟರ್, 51 ಇನ್ಸ್‍ಪೆಕ್ಟರ್, 8 ಸಶಸ್ತ್ರಪಡೆ, 40 ಭದ್ರತಾ ಪಡೆ, 1200 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

50 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಧ್ವಜಾರೋಹಣ ನೆರವೇರಲಿದ್ದು, ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‍ನಿಂದ ಪುಷ್ಪವೃಷ್ಟಿಯ ವ್ಯವಸ್ಥೆ ಮಾಡಲಾಗಿದೆ. ನಂತರ ಪರೇಡ್ ಮುಖ್ಯಮಂತ್ರಿಯವರು ವೀಕ್ಷಿಸಿ, ಗೌರವ ರಕ್ಷೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಲಿದ್ದಾರೆ.
ಜವಾಹರ್‍ನವೋದಯ ಶಾಲಾ ಮಕ್ಕಳಿಂದ ರಾಷ್ಟ್ರಗೀತೆ, ಈ ಬಾರಿ ಪಥಸಂಚಲನದಲ್ಲಿ ಕೇರಳ ಪೊಲೀಸ್ ಪಾಲ್ಗೊಳ್ಳಲಿದ್ದಾರೆ. ಸ್ಕೌಟ್ಸ್ ಅಂಡ್ ಗೈಡ್ಸ್, ಎನ್‍ಸಿಸಿ, ಸೇವಾದಳ ವಿವಿಧ ಶಾಲಾ ಮಕ್ಕಳನ್ನೊಳಗೊಂಡಂತೆ ಕವಾಯತು ಬ್ಯಾಂಡ್‍ನ ಒಟ್ಟು 34 ತುಕಡಿಗಳಲ್ಲಿ 1190 ಮಂದಿ ಭಾಗವಹಿಸಲಿದ್ದಾರೆ.

ಶಾಲಾ ಮಕ್ಕಳ ಒಟ್ಟು ನಾಲ್ಕು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ 2700 ಮಕ್ಕಳು ಭಾಗವಹಿಸಲಿದ್ದಾರೆ. ನಂತರ ಮುಖ್ಯಮಂತ್ರಿಗಳಿಂದ ವಿಜೇತರಿಗೆ ಬಹುಮಾನ ವಿತರಣೆ, ಜೀವರಕ್ಷಕ ಪ್ರಶಸ್ತಿ ವಿತರಣೆ ಮಾಡಲಾಗುವುದು. ಸಾಂಸ್ಕøತಿಕ ಕಾರ್ಯಕ್ರಮ: ಕಿಕ್ಕೇರಿ ಕೃಷ್ಣಮೂರ್ತಿ ತಂಡದವರಿಂದ ನಾಡಗೀತೆ ಮತ್ತು ರೈತಗೀತೆ. ಪೀಣ್ಯ ಸರ್ಕಾರಿ ಪ್ರೌಢಶಾಲೆ 750 ಮಕ್ಕಳಿಂದ ವೀರಸಿಂಧೂರ ಲಕ್ಷ್ಮಣ ನೃತ್ಯ, ಹೊಸಕೆರೆ ಹಳ್ಳಿ ಲಿಟಲ್ ಪ್ಲವರ್ ಪ್ರೌಢಶಾಲೆ ಮಕ್ಕಳಿಂದ ವಸುದೈವ ಕುಟುಂಬಕಂ, ಜೀವನ್‍ಭೀಮಾನಗರ ಸರ್ಕಾರಿ ಪ್ರೌಢಶಾಲೆ ಮಕ್ಕಳಿಂದ ಜೈ ಜವಾನ್, ಜೈಕಿಸಾನ್, ಶಾಂತಿಕ್ರಾಂತಿ, ವಿಜಯನಗರ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜು 700 ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರ ಮಹಾನ್‍ದೇಶಭಕ್ತ ಮುಂಡರಗಿ ಭೀಮರಾಯ ಕುರಿತ ನೃತ್ಯ ನಡೆಯಲಿದೆ.
30 ಜನ ಮಿಲಿಟರಿ ಸಿಬ್ಬಂದಿಗಳಿಂದ ರೋಚಕ ಮೋಟರ್ ಸೈಕಲ್ ಪ್ರದರ್ಶನ. ಶ್ವೇತಅಸ್ತ್ರ ನಡೆಯಲಿದೆ. ಪಥಸಂಚಲನ ಸಾಂಸ್ಕøತಿಕ ಕಾರ್ಯಕ್ರಮಗಳ ತಾಲೀಮು ನಡೆಯುತ್ತಿದೆ ಎಂದು ಅವರು ವಿವರಿಸಿದರು.  ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮೈದಾನಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ, ಮೈದಾನದ ಭದ್ರತೆ ಹಾಗೂ ಸುರಕ್ಷತೆಗಾಗಿ 50 ಸಿಸಿ ಕ್ಯಾಮೆರಾ, 4 ಬ್ಯಾಗೇಜ್ ಸ್ಕ್ಯಾನರ್, ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದ್ದಲ್ಲಿ ಆ್ಯಂಬುಲೆನ್ಸ್, ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಬೆಂಕಿ ಅವಘಡಗಳನ್ನು ನಿಭಾಯಿಸಿ ಅಗ್ನಿಶಾಮಕ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಆಸನದ ವ್ಯವಸ್ಥೆ: ಜಿ-1 ಪ್ರವೇಶದ್ವಾರದಲ್ಲಿ ಅತಿಗಣ್ಯ ವ್ಯಕ್ತಿಗಳಿಗಾಗಿ 2500 ಆಸನಗಳು, ಜಿ-2 ಪ್ರವೇಶ ದ್ವಾರದಲ್ಲಿ ಗಣ್ಯ ವ್ಯಕ್ತಿಗಳು ಸ್ವಾತಂತ್ರ್ಯ ಹೋರಾಟಗಾರರು, ರಕ್ಷಣಾ ಇಲಾಖೆ ಅಧಿಕಾರಿಗಳು, ಪತ್ರಿಕಾ ಪ್ರತಿನಿಧಿಗಳಿಗಾಗಿ 2500 ಆಸನಗಳ ವ್ಯವಸ್ಥೆ, ಜಿ-3 ಪ್ರವೇಶದ್ವಾರದಲ್ಲಿ ಇತರೆ ಇಲಾಖೆಯ ಎಲ್ಲಾ ಅಧಿಕಾರಿಗಳು ನಿವೃತ್ತ ಸೇನಾಧಿಕಾರಿಗಳು, ಬಿಎಸ್‍ಎಫ್ ಅಧಿಕಾರಿಗಳಿಗಾಗಿ 3000 ಆಸನಗಳು, ಜಿ-4 ಪ್ರವೇಶ ದ್ವಾರದಲ್ಲಿ ಸಾರ್ವಜನಿಕರಿಗಾಗಿ 4000 ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.

Independence-Day-1

Independence-Day-2

Independence-Day-3

Independence-Day-4

Independence-Day-5

Independence-Day-6

Independence-Day-7

Independence-Day-8

Independence-Day-9

Independence-Day-10

 

Independence-Day-11

Independence-Day-12

Independence-Day-13

Independence-Day-14

Independence-Day-15

Independence-Day-16

Independence-Day-17

Independence-Day-18

Independence-Day-19

Independence-Day-20

Independence-Day-21

Independence-Day-22

 

Facebook Comments

Sri Raghav

Admin