ಕೌಟುಂಬಿಕ ಕಲಹದಿಂದ ನೊಂದು ವಿಷ ಸೇವಿಸಿ ಶಿಕ್ಷಕಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

hanging -suicide

ಬೆಂಗಳೂರು, ಆ. 14-ಕೌಟುಂಬಿಕ ಕಲಹದಿಂದ ನೊಂದು ವಿಷ ಸೇವಿಸಿದ್ದ ಶಿಕ್ಷಕಿ ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಗ್ಗನಹಳ್ಳಿಯ ನಿವಾಸಿ ತೇಜಾವತಿ (25) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಹೆಗ್ಗನಹಳ್ಳಿಯ ರಮೇಶ್ ಎಂಬುವರೊಂದಿಗೆ ವಿವಾಹವಾಗಿದ್ದ ತೇಜಾವತಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಒಂದು ವಾರದ ಹಿಂದೆ ಗಲಾಟೆ ನಡೆದಿತ್ತು ಎನ್ನಲಾಗಿದ್ದು, ಇದರಿಂದ ನೊಂದ ತೇಜಾವತಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

Sri Raghav

Admin