ಪಾಕ್ ಸೇನಾ ಮುಖ್ಯಸ್ಥನಿಂದ ಭಾರತಕ್ಕೆ ಪರೋಕ್ಷ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Pakistan-Amry-Chief

ಇಸ್ಲಾಮಾಬಾದ್/ಲಾಹೋರ್, ಆ.14-ಪಾಕಿಸ್ತಾನಕ್ಕೆ ಇಂದು 70ನೇ ಸ್ವಾತಂತ್ರ್ಯ ದಿನಾಚರಣೆ ಸಡಗರ-ಸಂಭ್ರಮ. ದೇಶಾದ್ಯಂತ ಪಾಕಿಸ್ತಾನಿಯರು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದಾರೆ. ಲಾಹೋರ್ ಬಳಿ ಅಟ್ಟಾರಿ-ವಾಘಾ ಗಡಿಯಲ್ಲಿ ಇದು ಬೃಹತ್ ಧ್ವಜಾರೋಹಣ ನೆರವೇರಿಸಲಾಯಿತು. ಇದು 400 ಅಡಿಗಳಷ್ಟು ಎತ್ತರ ಹಾಗೂ 120 ಅಡಿ ಉದ್ದ ಮತ್ತು 80 ಅಡಿ ಅಗಲ ಹೊಂದಿದೆ.

ಪಾಕಿಸ್ತಾನವು ಹಾರಿಸಿದ ಈ ಧ್ವಜವು ದಕ್ಷಿಣ ಏಷ್ಯಾದಲ್ಲೇ ಅತ್ಯಂತ ದೊಡ್ಡದು ಹಾಗೂ ವಿಶ್ವದಲ್ಲಿ 8ನೇ ಬೃಹತ್ ಬಾವುಟ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಪಾಕಿಸ್ತಾನದ ಸೇನಾ ಮುಖ್ಯಸ್ಥ ಖಮರ್ ಜಾವೇಡ್ ಬಾಜ್ವಾ ನಿನ್ನೆ ರಾತ್ರಿ ಸರಿಯಾಗಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥರು, ಪಾಕಿಸ್ತಾನವನ್ನು ದುರ್ಬಲಗೊಳಿಸುವ ಯಾವುದೇ ಶಕ್ತಿಗೂ ನಾವು ಅವಕಾಶ ನೀಡುವುದಿಲ್ಲ. ಅಂಥ ಪ್ರಯತ್ನಗಳನ್ನು ನಾವು ವಿಫಲಗೊಳಿಸುತ್ತೇವೆ ಎಂದು ಅವರು ಭಾರತವನ್ನು ಪರೋಕ್ಷವಾಗಿ ಉಲ್ಲೇಖಿಸಿ ನುಡಿದರು.

ದೇಶಭಕ್ತಿ ತ್ಯಾಗ, ಬಲಿದಾನ ಮತ್ತು ಹೋರಾಟದ ಫಲವಾಗಿ ನಾವು ಇಂದು ಸ್ವಾತಂತ್ರ್ಯದ ಸವಿಯನ್ನು ಅನುಭವಿಸುತ್ತಿದ್ದೇವೆ. ಪಾಕಿಸ್ತಾನವು ಅಭಿವೃದ್ದಿ ಪಥದತ್ತ ಸಾಗಿದೆ. ಎಲ್ಲ ಸಂಸ್ಥೆಗಳು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿವೆ. ನಮ್ಮ ದೇಶವನ್ನು ಮತ್ತಷ್ಟು ಶಕ್ತಿಶಾಲಿಯಾಗಿಸಲು ನಾವೆಲ್ಲರೂ ಶ್ರಮಿಸಬೇಕಿದೆ ಎಂದು ಅವರು ಹೇಳಿದರು.

Facebook Comments

Sri Raghav

Admin