ಅಮಿತ್‍ ಷಾರಂಥ ನೂರು ಜನ ಬಂದರೂ ಕಾಂಗ್ರೆಸ್ ಹೆದರೋಲ್ಲ : ಉಮಾಶ್ರೀ

ಈ ಸುದ್ದಿಯನ್ನು ಶೇರ್ ಮಾಡಿ

umashri

ಬಾಗಲಕೋಟೆ, ಆ.15-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಂತಹ ನೂರು ಜನ ಬಂದರೂ ಕಾಂಗ್ರೆಸ್ ಅಂಜುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 71ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜಕೀಯ ಇತಿಹಾಸದಲ್ಲಿ ಕಾಂಗ್ರೆಸ್ ಬಲಿಷ್ಠವಾದ ಪಕ್ಷ . ಕಾಂಗ್ರೆಸ್ ಇದ್ದಾಗ ಬಿಜೆಪಿ ಇರಲಿಲ್ಲ. ಅಮಿತ್ ಷಾ ಅವರಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ಹೆದರುವುದಿಲ್ಲ ಎಂದು ಹೇಳಿದ್ದಾರೆ.

ಅಮಿತ್ ಷಾ ಅವರು ಪಕ್ಷದ ನಾಯಕರಷ್ಟೆ. ಅವರಿಗೆ ಹೆದರುವ ಅಗತ್ಯವಿಲ್ಲ. ನಮ್ಮ ಪಕ್ಷದಲ್ಲಿ ಸಾಕಷ್ಟು ಪ್ರಭಾವಿ ನಾಯಕರಿದ್ದಾರೆ. ಸರ್ಕಾರ ಪಾರದರ್ಶಕ ಆಡಳಿತ ನೀಡುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸೇ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  ಅಮಿತ್ ಷಾ ರಾಜ್ಯಕ್ಕೆ ಬರುವುದಕ್ಕಿಂತ ಮೊದಲೇ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದು ನಿಗದಿಯಾಗಿತ್ತು. ಆದರೆ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ನಿಧನ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಹಾಗಾಗಿ ಕಳೆದ ಎರಡು ದಿನಗಳ ಹಿಂದೆ ರಾಯಚೂರಿನಲ್ಲಿ ನಡೆದ ಪಕ್ಷ ಸಮಾವೇಶದಲ್ಲಿ ಭಾಗವಹಿಸಿದರು ಎಂದರು.

ಯಾರೂ ಬೇಕಾದರೂ ರಾಜಕೀಯಕ್ಕೆ ಪ್ರವೇಶ ಮಾಡಬಹುದು. ರಾಜಕೀಯ ನಿಂತಲ್ಲ ನೀರಲ್ಲ. ಅದರಂತೆ ನಟ ಉಪೇಂದ್ರ ಅವರು ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ ಎಂದರು.

Facebook Comments

Sri Raghav

Admin