ಚಿಕ್ಕಮಗಳೂರಲ್ಲಿ ಸಚಿವ ರೋಷನ್ ಬೇಗ್ ಧ್ವಜಾರೋಹಣ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು,ಆ.15- ಸ್ವಾತಂತ್ರ್ಯದ ಸಮಯದಲ್ಲಿ 1927, ಆಗಸ್ಟ್ 18ರಂದು ಮಹಾತ್ಮ ಗಾಂಧೀಜಿ ಅವರು ಜಿಲ್ಲೆಗೆ ಭೇಟಿ ನೀಡಿ ಯುವಕರಿಗೆ ಸ್ವಾತಂತ್ರ್ಯದ ಬಗ್ಗೆ ಮಾಹಿತಿ ನೀಡಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ರೋಷನ್ ಬೇಗ್ ಸ್ಮರಿಸಿಕೊಂಡರು.  ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ ನಡೆದ 71ನೇ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣವನ್ನು ಮಾಡಿ ಮಾತನಾಡಿದ ಅವರು, ಭಾರತ ಬಹುಭಾಷಾ, ಬಹುಧರ್ಮ, ಬಹು ಸಂಸ್ಕøತಿ ಹೊಂದಿದೆ. ಈ ಏಕತೆಯನ್ನು ಸಂವಿಧಾನದ ರೀತ್ಯ ರಕ್ಷಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ. ಸಾಹಿತ್ಯ ಕ್ಷೇತ್ರದಲ್ಲಿ ಪೂರ್ಣಚಂದ್ರ ತೇಜಸ್ವಿ ಜಿಲ್ಲೆಯವರಾಗಿದ್ದು ಸಾಹಿತ್ಯಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ.

ಶೃಂಗೇರಿ, ಹೊರನಾಡು, ಮುಳ್ಳಯ್ಯನಗಿರಿ ಹೀಗೆ ಅನೇಕ ಪ್ರೇಕ್ಷಣೀಯ ಸ್ಥಳಗಳು ಜಿಲ್ಲೆಯಲ್ಲಿವೆ ಎಂದು ತಿಳಿಸಿದರು.  ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಒಳಗೊಂಡಿದೆ. ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ರಕ್ತ ದ್ವಿದಳ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಿದ್ಯಾಸಿರಿ ಯೋಜನೆಯಡಿ 47 ಲಕ್ಷ ಅನುದಾನ ಒದಗಿಸಲಾಗಿದೆ. ಸ್ವಚ್ಛ ಭಾರತ ಮಿಷನ್ ಯೋಜನೆಯಲ್ಲಿ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಕ್ಟೋಬರ್ 2ರೊಳಗೆ ಮಾಡಲಾಗುವುದು ಎಂದು ತಿಳಿಸಿದರು.  ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನು ಬಳಸಿಕೊಂಡು ನಾಡು ಕಟ್ಟೋಣ ಎಂದು ಅವರು ಹೇಳಿದರು.

Facebook Comments

Sri Raghav

Admin