ದುಷ್ಟಶಕ್ತಿಗಳ ವಿರುದ್ಧ ಹೋರಾಟಕ್ಕೆ ಸೋನಿಯಾ ಕರೆ

ಈ ಸುದ್ದಿಯನ್ನು ಶೇರ್ ಮಾಡಿ

Soniya

ನವದೆಹಲಿ, ಆ. 15- ಪ್ರತ್ಯೇಕತಾವಾದ, ಭಯೋತ್ಪಾದನೆ ಮತ್ತು ಸಾಮಾಜವನ್ನು ಒಡೆಯುವ ಹಾಗೂ ಸಮಾಜದಲ್ಲಿ ದ್ವೇಷವನ್ನು ಬಿತ್ತುವ ದುಷ್ಟಶಕ್ತಿಗಳ ವಿರುದ್ಧ ಹೋರಾಡಲು ಭಾರತೀಯರೆಲ್ಲ ಇಂದು ಒಗ್ಗೂಡುವ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ನೀಡಿದರು. 71ನೆ ಸ್ವಾತಂತ್ರ್ಯ ದಿನೋತ್ಸವದ ಈ ಸಂದರ್ಭ ಟ್ವೀಟ್ ಮಾಡಿರುವ ಅವರು, ದೇಶದ ಜನತೆಗೆ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ಹೇಳಿ ಸರ್ವರಿಗೂ ಸುಖ-ಸಮೃದ್ಧಿಗಳನ್ನು ತರಲಿ ಎಂದು ಕೋರಿದ್ದಾರೆ.

ಪ್ರತ್ಯೇಕತಾವಾದಿಗಳು, ಭಯೋತ್ಪಾದಕರು ಮತ್ತು ಸಾಮಾಜಘಾತಕ ದುಷ್ಟಶಕ್ತಿಗಳ ವಿರುದ್ಧ ಪ್ರತಿಯೊಬ್ಬರೂ ಹೋರಾಟಕ್ಕೆ ಸಿದ್ಧರಾಗುವುದು ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

Facebook Comments

Sri Raghav

Admin