ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೇಣಿಗೆ ಶರಣಾದ ಬಿಇ ವಿದ್ಯಾರ್ಥಿ

hanging--suicide

ಬೆಂಗಳೂರು, ಆ.15-ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದರಿಂದ ನೊಂದ ಬಿಇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಅಮೃತಹಳ್ಳಿ ಕಾಫಿ ಬೋರ್ಡ್‍ನ ನಿವಾಸಿ ಸಂಭ್ರಮ್(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕಾರ್ಕಳದ ಕಾಲೇಜೊಂದರಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದ ಸಂಭ್ರಮ್ ಪರೀಕ್ಷೆ ಮುಗಿಸಿ ಮನೆಗೆ ಬಂದಿದ್ದನು. ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು, ಮನನೊಂದು ರಾತ್ರಿ 8 ಗಂಟೆಯಿಂದ 11 ಗಂಟೆ ಮಧ್ಯೆ ರೂಮ್‍ನಲ್ಲಿ ಫ್ಯಾನ್‍ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯರಾತ್ರಿ ಈತನ ಅಣ್ಣ ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ.

ಅಮೃತಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಶವವನ್ನು ಅಂಬೇಡ್ಕರ್ ಮೆಡಿಕಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ.

Facebook Comments

Sri Raghav

Admin