ಮೈಸೂರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರಿಂದ ಧ್ವಜಾರೋಹಣ

ಈ ಸುದ್ದಿಯನ್ನು ಶೇರ್ ಮಾಡಿ

Msyruru-News

ಮೈಸೂರು,ಆ.15- ವಿಶ್ವದ ಹಲವೆಡೆ ಪ್ರಜಾಪ್ರಭುತ್ವ ವ್ಯವಸ್ಥೆ ವಿಫಲವಾಗಿದ್ದರೂ ಭಾರತ ಶ್ರೇಷ್ಠವಾದ ಸಂವಿಧಾನ ಹೊಂದಿರುವುದರಿಂದ ಬಲಿಷ್ಠವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಮಳೆ ನಡುವೆಯೇ ಮೈಸೂರಿನ ಬನ್ನಿ ಮಂಟಪದಲ್ಲಿನ ಪಂಜಿನ ಕವಾಯತು ಮೈದಾನದಲ್ಲಿ ಇಂದು ಬೆಳಗ್ಗೆ ನಡೆದ 71ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.  ವಿಶ್ವದಲ್ಲಿನ ಹಲವಾರು ಸಂವಿಧಾನಗಳನ್ನು ಅಧ್ಯಯನ ಮಾಡಿ ಸರ್ವ ಶ್ರೇಷ್ಠವಾದಂತಹ ಸಂವಿಧಾನವನ್ನು ಭಾರತಕ್ಕೆ ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ. ಹಾಗಾಗಿ ನಮ್ಮ ದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಬಲಿಷ್ಠವಾಗಿದೆ ಎಂದರು.

ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬರೂ ಏಕತೆಯಿಂದ ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ಯಬೇಕೆಂದು ಅವರು ನಾಡಿನ ಜನತೆಗೆ ಕರೆ ನೀಡಿದರು.  ಸ್ವಾತಂತ್ರಕ್ಕಾಗಿ ಕೋಟ್ಯಂತರ ಮಂದಿ ಪ್ರಾಣ ತ್ಯಾಗ ಮಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಅದನ್ನು ಕಾಪಾಡಿಕೊಂಡು ಹೋಗಬೇಕು. ಯುದ್ಧವಿಲ್ಲದೆ ಅಹಿಂಸೆ ಮೂಲಕ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ್ದಾರೆ. ಅಹಿಂಸೆಯಿಂದ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಮಹಾತ್ಮ ಗಾಂಧೀಜಿಯವರು ಈ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಸ್ವಾತಂತ್ರ್ಯ ನಂತರದ ದೇಶದ ಜನತೆಯ ಹಕ್ಕು ರಕ್ಷಿಸುವ ಕರ್ತವ್ಯ ನಮ್ಮದಾಗಿದೆ. ಈ ಕೆಲಸವನ್ನು ಕಾಂಗ್ರೆಸ್ ಸಮರ್ಥವಾಗಿ ನಿಭಾಯಿಸಿದೆ ಎಂದರು.
ರಾತ್ರಿ ಇಡೀ ಸುರಿದ ಮಳೆಯಿಂದಾಗಿ ಪಂಜಿನ ಕವಾಯತು ಮೈದಾನ ಕೆರೆಯಂತಾಗಿತ್ತು. ಇದರ ಮಧ್ಯೆಯೇ ವಿದ್ಯಾರ್ಥಿಗಳು ಸಾಂಸ್ಕøತಿಕ ಕಾರ್ಯಕ್ರಮ ನಡೆಸಿಕೊಟ್ಟರು.  ಇದಕ್ಕೂ ಮುನ್ನ ವಿವಿಧ ಸೇನಾ ಪಡೆಗಳಿಂದ ಸಚಿವರು ಪರೇಡ್ ವಂದನೆ ಸ್ವೀಕರಿಸಿದರು. 20ಕ್ಕೂ ಹೆಚ್ಚು ಸೇನಾ ಪಡೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು.

Facebook Comments

Sri Raghav

Admin