ಮೈಸೂರಲ್ಲಿ ರಾತ್ರಿ ಇಡೀ ಸುರಿದ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Mysuru--01

ಮೈಸೂರು, ಆ.15- ರಾತ್ರಿ ಇಡೀ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಎನ್.ಆರ್. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಾಂಧೀನಗರದ ಲಿಡ್ಕರ್ ಕಾಲೋನಿ ನಿವಾಸಿ ಮಗ್ಗಿ (40) ಮೃತಪಟ್ಟ ದುರ್ದೈ ವಿ. ರಾತ್ರಿಯಿಡೀ ಸುರಿದ ವರುಣನ ಆರ್ಭಟಕ್ಕೆ ಇವರ ಮನೆಯ ಗೋಡೆ ಕುಸಿದು ಮಲಗಿದ್ದ ಮಗ್ಗಿ ಅವರ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಎನ್.ಆರ್.ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin