ನಾನು ಮತ್ತು ಯಡಿಯೂರಪ್ಪ ರಾಮ-ಲಕ್ಷ್ಮಣರಿದ್ದಂತೆ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-Eshwarappa

ಶಿವಮೊಗ್ಗ, ಆ.16- ನಾನು ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಡುವಿನ ಸಂಬಂಧ ರಾಮ-ಲಕ್ಷ್ಮಣರ ಸಂಬಂಧವಿದ್ದಂತೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬಣ್ಣಿಸಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಾವಿಬ್ಬರೂ ಅಣ್ಣ ತಮ್ಮಂದಿರಿದ್ದಂತೆ ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. 2018ರ ಚುನಾವಣೆಯನ್ನು ಒಟ್ಟಾಗಿಯೇ ಎದುರಿಸುತ್ತೇವೆ ಎಂದು ಹೇಳಿದರು.  ಮುಂಬರುವ ಚುನಾವಣೆಗೆ ಟಿಕೆಟ್ ನೀಡಿದರೆ ಶಿವಮೊಗ್ಗದ ಮೇಲೆ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಒಬ್ಬ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.

Facebook Comments

Sri Raghav

Admin