ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳನ್ನೂ ಎಗರಿಸುತ್ತಿದ್ದ ಕಳ್ಳ ಅಂದರ್

ಈ ಸುದ್ದಿಯನ್ನು ಶೇರ್ ಮಾಡಿ

Arrest--01

ಬೆಂಗಳೂರು, ಆ.16- ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಉತ್ತರ ವಿಭಾಗದ ಬಾಗಲಗುಂಟೆ ಪೊಲೀಸರು ಬಂಧಿಸಿ 20 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಳಹಸ್ತಿ ನಗರದ ರಂಗಸ್ವಾಮಿ (28) ಬಂಧಿತ ಯುವಕನಾಗಿದ್ದು, ಈತನಿಂದ 10 ಲಕ್ಷ ರೂ. ಬೆಲೆಬಾಳುವ ವಿವಿಧ ಕಂಪೆನಿಯ 20 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈತ ಮನೆ ಮುಂದೆ ನಿಲ್ಲಿಸಿ ದ್ದಂತಹ ದ್ವಿಚಕ್ರ ವಾಹನಗಳನ್ನು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದನು.

ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಬಾಗಲಗುಂಟೆ ಠಾಣೆ ವ್ಯಾಪ್ತಿಯ 4 ಪ್ರಕರಣ, ಪೀಣ್ಯ 1 ಸೇರಿದಂತೆ ವಿವಿಧ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ಸ್‍ಪೆಕ್ಟರ್ ವಿರೂಪಾಕ್ಷ ಸ್ವಾಮಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದರು.

Facebook Comments

Sri Raghav

Admin