ಲವ್ ಜಿಹಾದ್ ಪ್ರಕರಣದ ಬಗ್ಗೆ ಎನ್‍ಐಎ ತನಿಖೆಗೆ ಸುಪ್ರೀಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Love-Jihad

ನವದೆಹಲಿ, ಆ.16- ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಮಹಿಳೆಯನ್ನು ವಿವಾಹವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಗೊಳಿಸಿದ ಕೇರಳದ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ)ಗೆ ನಿರ್ದೇಶನ ನೀಡಿದೆ. ಈ ಪ್ರಕರಣವನ್ನು ಕೇರಳ ಹೈಕೋರ್ಟ್ ಲವ್ ಜಿಹಾದ್ ಎಂದು ಬಣ್ಣಿಸಿ ತೀರ್ಪು ನೀಡಿತ್ತು. ಇದರ ವಿರುದ್ಧ ಮುಸ್ಲಿಂ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಪೀಠ ಇಂದು ವಿಚಾರಣೆ ನಡೆಸಿತು.

ಈ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಆರ್.ವಿ.ರವೀಂದ್ರನ್ ನೇತೃತ್ವದಲ್ಲಿ ತನಿಖೆ ನಡೆಸಿ ಶೀಘ್ರ ವರದಿ ನೀಡುವಂತೆ ಪೀಠವು ಎನ್‍ಐಎಗೆ ಸೂಚಿಸಿತು. ಅಲ್ಲದೆ, ಈ ಸಂಬಂಧ ಸಲ್ಲಿಸಲಾಗುವ ವರದಿ, ಕೇರಳ ಪೊಲೀಸರ ಹೇಳಿಕೆ ಮತ್ತು ಮತಾಂತರಗೊಂಡ ಮಹಿಳೆಯ ವಿವರಗಳನ್ನು ಪಡೆದ ನಂತರ ಪ್ರಕರಣದ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.

Facebook Comments

Sri Raghav

Admin