ಆ.22ಕ್ಕೆ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ

ಈ ಸುದ್ದಿಯನ್ನು ಶೇರ್ ಮಾಡಿ

Bank-Strike--01

ಚನ್ನೈ, ಆ.17- ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆ (ಯುಎಫ್‍ಬಿಯು) ಆ.22ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದೆ. ಈ ಸಂಬಂಧ ಮುಂಬೈನಲ್ಲಿ ನಿನ್ನೆ ನಡೆದ ಭಾರತೀಯ ಬ್ಯಾಂಕುಗಳ ಸಂಘ(ಐಬಿಎ) ಜತೆ ನಡೆದ ಮಾತುಕತೆ ವಿಫಲವಾಗಿದ್ದು, ನಿಗದಿಯಂತೆ ಆ.22ರಂದು ದೇಶಾದ್ಯಂತ ಮುಷ್ಕರ ನಡೆಸುವುದಾಗಿ ವೇದಿಕೆ ಘೋಷಿಸಿದೆ.ಈ ಸಂಯುಕ್ತ ವೇದಿಕೆಯಲ್ಲಿ ಭಾರತೀಯ ಬ್ಯಾಂಕಿಂಗ್ ವಲಯದ 9 ಒಕ್ಕೂಟಗಳಿವೆ.

ಬ್ಯಾಂಕಿಂಗ್ ವಲಯಗಳ ಸುಧಾರಣೆಗಳ ವಿರುದ್ಧ ಹಾಗೂ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.22ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಯುಎಫ್‍ಬಿಯು ನೋಟಿಸ್ ನೀಡಿದೆ. ನಮ್ಮ ಬೇಡಿಕೆಗಳಿಗೆ ಪೂರಕ ಆಶ್ವಾಸನೆ ಲಭಿಸಿಲ್ಲ. ಹೀಗಾಗಿ ಆ.22ರಂದು ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ (ಎಐಬಿಇಎ) ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ ತಿಳಿಸಿದ್ದಾರೆ.

Facebook Comments

Sri Raghav

Admin