ಈ ಬಾರಿಯ ದಸರಾ ಉದ್ಘಾಟಿಸಲಿದ್ದಾರೆ ಕವಿ ‘ನಿತ್ಯೋತ್ಸವ’ದ ಕವಿ ಕೆ.ಎಸ್.ನಿಸಾರ್ ಅಹಮದ್

ಈ ಸುದ್ದಿಯನ್ನು ಶೇರ್ ಮಾಡಿ

K.-S.-Nissar-Ahmed

ಮೈಸೂರು, ಆ.17- ಈ ಬಾರಿಯ ದಸರಾ ಉತ್ಸವವನ್ನು ಖ್ಯಾತ ಕವಿ ನಿತ್ಯೋತ್ಸವ ಖ್ಯಾತಿಯ ಕೆ.ಎಸ್.ನಿಸಾರ್ ಅಹಮದ್ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. ಅರಮನೆ ಆವರಣದಲ್ಲಿ ಮೊದಲ ಹಂತದ ಗಜಪಡೆಗಳನ್ನು ಬರಮಾಡಿಕೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ದಸರಾ ಉನ್ನತ ಮಟ್ಟದ ಸಭೆಯಲ್ಲಿ ಈ ಬಾರಿಯ ದಸರಾ ಮಹೋತ್ಸವ ಉದ್ಘಾಟನೆಗೆ ಕವಿ ನಿಸಾರ್ ಅಹಮದ್ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಸದ್ಯದಲ್ಲೇ ಅವರ ಮನೆಗೆ ಭೇಟಿ ನೀಡಿ ಅವರನ್ನು ಅಧಿಕೃತವಾಗಿ ಆಹ್ವಾನಿಸುತ್ತೇವೆ ಎಂದು ತಿಳಿಸಿದರು.

ಅಂದು ಬೆಳಗ್ಗೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ ದಸರೆಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು. ಕ್ಯಾಪ್ಟನ್ ಅರ್ಜುನ ನೇತೃತ್ವದ ಎಂಟು ಆನೆಗಳನ್ನು ಇಂದು ಅರಮನೆಗೆ ಬರಮಾಡಿಕೊಳ್ಳಲಾಗಿದೆ. ಈ ಬಾರಿ ಸಾಂಪ್ರದಾಯಿಕವಾಗಿ ದಸರಾವನ್ನು ಆಚರಿಸಲಾಗುತ್ತದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸೆ.21ರಂದು 9 ದಿನಗಳ ದಸರಾ ಉತ್ಸವ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಗೌರವ ರಕ್ಷೆ:

ಇದೇ ಮೊದಲ ಬಾರಿಗೆ ಗಜ ಪಡೆಗೆ ಪೊಲೀಸರಿಂದ ಗೌರವ ರಕ್ಷೆ ನೀಡಲಾಯಿತು. ಅರಮನೆ ಮೇಲಿಂದ ಆನೆಗಳಿಗೆ ಪುಷ್ಪಾರ್ಚನೆ ಮಾಡಿದುದು ವಿಶೇಷವಾಗಿತ್ತು. ಇದೇ ವೇಳೆ ಮಾವುತರಿಗೆ ಗೃಹೋಪಯೋಗಿ ಕಿಟ್‍ಗಳನ್ನು ನೀಡಲಾಯಿತು. ಅದರಲ್ಲಿ ಅವರಿಗೆ ದಿನನಿತ್ಯ ಬಳಸುವ ಗೃಹೋಪಯೋಗಿ ವಸ್ತುಗಳನ್ನು ಇಡಲಾಗಿದೆ. ಜಿಲ್ಲಾಡಳಿತದ ವತಿಯಿಂದ ಕಿಟ್‍ಗಳನ್ನು ಮಹದೇವಪ್ಪ ವಿತರಿಸಿದರು.

Facebook Comments

Sri Raghav

Admin