ಭರ್ತಿಯಾದ ಆಲಮಟ್ಟಿ ಜಲಾಶಯ, ನಾಳೆ ಸಿಎಂ ಬಾಗಿನ ಅರ್ಪಣೆ

ಈ ಸುದ್ದಿಯನ್ನು ಶೇರ್ ಮಾಡಿ

Alamatti-Dam--01

ಬೆಂಗಳೂರು, ಆ.17- ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಣೆ ಮಾಡಲಿದ್ದಾರೆ. ರಾಜ್ಯದಲ್ಲಿ ಮಳೆ ಕೊರತೆಯಾಗಿ ಬರದ ಛಾಯೆ ಆವರಿಸಿದ್ದು, ಬಹುತೇಕ ಜಲಾಶಯಗಳು ನೀರಿನ ಕೊರತೆಯನ್ನು ಎದುರಿಸುತ್ತಿರುವ ಸಮಯದಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ನಾಳೆ ಮಧ್ಯಾಹ್ನ 12.30ಕ್ಕೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಣೆ ಮಾಡಲಿದ್ದಾರೆ.

ಜಲಾಶಯದಲ್ಲಿ 519.6ಮೀಟರ್‍ವರೆಗೂ ಪೂರ್ಣ ಪ್ರಮಾಣದ ನೀರು ಸಂಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಬಾಗಿನ ಅರ್ಪಣೆ ಮಾಡುತ್ತಿದ್ದು, ಮುಖ್ಯಮಂತ್ರಿ ಜತೆ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

Facebook Comments

Sri Raghav

Admin