ಮೇಲ್ಮನೆ ಉಪಚುನಾವಣೆಯಿಂದ ಹಿಂದೆ ಸರಿದ ಜೆಡಿಎಸ್

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-And-JDS-DevegowKumaraswamy-And-JDS-Devegow

ಬೆಂಗಳೂರು, ಆ.17- ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ಉಪಚುನಾವಣೆ ಯಲ್ಲಿ ಜೆಡಿಎಸ್ ಸ್ಪರ್ಧಿ ಸದಿರಲು ನಿರ್ಧರಿಸಿದೆ. ವಿಧಾನಪರಿಷತ್ ಸದಸ್ಯರಾಗಿದ್ದ ವಿಮಲಾ ಗೌಡ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಆ.31ರಂದು ಚುನಾವಣೆ ನಡೆಯಲಿದೆ. ಜೆಡಿಎಸ್ನ 40 ಶಾಸಕರ ಪೈಕಿ ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಆರೋಪದ ಮೇಲೆ 7 ಮಂದಿ ಅಮಾನತುಗೊಂಡಿದ್ದಾರೆ. ಹೀಗಾಗಿ ಅಭ್ಯರ್ಥಿ ಗೆಲ್ಲುವಷ್ಟು ಶಾಸಕರ ಸಂಖ್ಯೆ ಇಲ್ಲದಿರುವುದರಿಂದ ಜೆಡಿಎಸ್ ಚುನಾವಣಾ ಕಣದಿಂದಲೇ ಹಿಂದೆ ಸರಿಯಲಿದೆ.

ಈಗಾಗಲೇ ಚುನಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಸಲು ಆ.21 ಕಡೆಯ ದಿನವಾಗಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲುವುದು ಖಚಿತ. ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ. 2018ರ ಜೂ.17ಕ್ಕೆ ವಿಮಲಾಗೌಡ ಅವರು ನಿವೃತ್ತಿಯಾಗುತ್ತಿದ್ದರು. ಹೊಸದಾಗಿ ಮೇಲ್ಮನೆಗೆ ಆಯ್ಕೆಯಾಗುವ ಸದಸ್ಯರಿಗೆ 10 ತಿಂಗಳಿಗಿಂತ ಕಡಿಮೆ ಅವಧಿ ದೊರೆಯಲಿದೆ.

Facebook Comments

Sri Raghav

Admin