ರಾಜ್ಯ ಸರ್ಕಾರದಿಂದ ಕೇಂದ್ರ ಯೋಜನೆಗಳ ಸರ್ಕಾರದ ಹೈಜಾಕ್ : ಶೋಭಾ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

shobha

ಚಿಕ್ಕಮಗಳೂರು, ಆ.17- ಕೇಂದ್ರ ಸರ್ಕಾರದ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಜನ ಸಂಜೀವಿನಿ ಹೆಸರಿಗೆ ಬದಲಿಸಿ ಸಾರ್ವಜನಿಕರಿಗೆ ಔಷಧಿಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಮುಂದಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ನಗರದಲ್ಲಿ ನೂತನವಾಗಿ ಆರಂಭಗೊಂಡ ಕೇಂದ್ರೀಯ ವಿದ್ಯಾಲಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಜನೌಷಧಿಯನ್ನು ರಾಜ್ಯ ಸರ್ಕಾರ ಜನ ಸಂಜೀವಿನಿ ಹೆಸರಿನಲ್ಲಿ ಪ್ರಾರಂಭಿಸುತ್ತಿದ್ದು, ಎಚ್‍ಎಲ್‍ಎಲ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಹೆಚ್ಚಿನ ಹಣ ಕೊಳ್ಳೆ ಹೊಡೆಯಲು ಮುಂದಾಗಿದೆ ಎಂದು ಹರಿಹಾಯ್ದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನೌಷಧಿ ಯೋಜನೆಯನ್ನು ಕೂಡಲೇ ರಾಜ್ಯ ಸರ್ಕಾರ ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು ಎಂದ ಅವರು, ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಇಂದಿರಾ ಗಾಂಧಿ ಅವರ ಹೆಸರು ಬದಲಾಯಿಸುತ್ತಿರುವುದಕ್ಕೆ ವಿರೋಧಿಸಿದರು. ಯಾವುದೇ ಕಾರಣಕ್ಕೂ ಮೊರಾರ್ಜಿ ದೇಸಾಯಿ ಹೆಸರನ್ನು ಬದಲಾಯಿಸಬೇಡಿ. ಇದಕ್ಕೆ ಬದಲಿಗೆ ಇನ್ನಷ್ಟು ಹೊಸ ಶಾಲೆಗಳನ್ನು ತೆರೆದು ಅವುಗಳಿಗೆ ಇಂದಿರಾಗಾಂಧಿ ಹೆಸರು ನಾಮಕರಣ ಮಾಡಿ ಎಂದು ಸಂಸದೆ ಸಲಹೆ ನೀಡಿದರು.

ಶಾಸಕ ಸಿ.ಟಿ.ರವಿ ಮಾತನಾಡಿ, ಕೇಂದ್ರ ಸರ್ಕಾರದ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಜನ ಸಂಜೀವಿನಿಯಾಗಿ ಪರಿವರ್ತಿಸಿರುವುದು ಮೇಲ್ನೋಟಕ್ಕೆ ಅವ್ಯವಹಾರ ಎಂದು ಕಾಣುತ್ತಿದೆ. ಇದರ ಕುರಿತು ಆರೋಗ್ಯ ಸಚಿವ ಕೆ.ಆರ್.ರಮೇಶ್‍ಕುಮಾರ್ ಅವರ ಗಮನ ಸೆಳೆಯಲಾಗುವುದು ಎಂದರು.
ಇಂದಿನಿಂದ ನಗರದಲ್ಲಿ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ತರಬೇತಿ ಪ್ರಾರಂಭವಾಗಿದ್ದು, ಕೇಂದ್ರೀಯ ವಿದ್ಯಾಲಯಕ್ಕೆ ಪ್ರತ್ಯೇಕ ಕಟ್ಟಡದ ಅವಶ್ಯಕತೆಯಿದೆ. ಹಾಗಾಗಿ ನಗರದ ಹೊರ ವಲಯ ಕದ್ರಿನಿದ್ರಿ ಬಳಿ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ 10 ಎಕರೆ ಜಮೀನನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 16 ಕೊಟಿ ಅನುದಾನ ಬಂದಿದ್ದು, ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸತ್ಯವತಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ, ಶಾಸಕ ಸಿ.ಟಿ.ರವಿ, ಜಿಪಂ ಅಧ್ಯಕ್ಷೆ ಚೈತ್ರಶ್ರೀ ಸೇರಿದಂತೆ ಮತ್ತಿತರರಿದ್ದರು.

Facebook Comments

Sri Raghav

Admin