ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಮರಗಳ್ಳರು ಪರಾರಿ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಆ.18-ಅಕ್ರಮವಾಗಿ ಮರ ಕಡಿದು ಸಾಗಿಸುತ್ತಿದ್ದ ಮರಗಳ್ಳರು ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಅರಣ್ಯ ರಕ್ಷಕ ಜಯಸ್ವಾಮಿ, ಅರಣ್ಯ ವೀಕ್ಷಕ ಬೋಗೇಶ್ ಹಲ್ಲೆಗೊಳಗಾದ ಸಿಬ್ಬಂದಿಗಳಾಗಿದ್ದು, ಇವರು ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಚಿಕ್ಕರಂಗಾಪುರದ ಅರಣ್ಯ ಪ್ರದೇಶದಲ್ಲಿ ಬೋಚಿಹಳ್ಳಿ ಗ್ರಾಮದ ಶಿವನಂಜಪ್ಪ, ಗಿರೀಶ್ ಎಂಬುವರು ಅಕ್ರಮವಾಗಿ ಮರಕಡಿದು ಟ್ರ್ಯಾಕ್ಟರ್‍ನಲ್ಲಿ ಸಾಗಿಸುತ್ತಿದ್ದರು,ಈ ವೇಳೆ ಅರಣ್ಯ ರಕ್ಷಕ ಜಯಸ್ವಾಮಿ ಅವರು ಟ್ರ್ಯಾಕ್ಟರನ್ನು ನಿಲ್ಲಿಸಿ ಪ್ರಶ್ನಿಸುತ್ತಿದ್ದಂತೆ ಇವರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಆಗಮಿಸಿದ ಬೋಗೇಶ್ ಮೇಲೂ ಹಲ್ಲೆ ನಡೆಸಿ ಟ್ರ್ಯಾಕ್ಟರ್ ಸಮೇತ ಪರಾರಿಯಾಗಿದ್ದಾರೆ. ಈ ಸಂಬಂಧ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin