ಕಾಂಗ್ರೆಸ್ ಹೈಕಮಾಂಡ್ ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತದೆ ಎಂಬ ವಿಶ್ವಾಸವಿದೆ : ಚಲುವರಾಯ ಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Chaluvarayaswamy01

ಬೆಂಗಳೂರು,ಆ.18- ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮತ್ತು ನಾಯಕರು ತಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಾರೆಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಎನ್.ಚಲುವರಾಯ ಸ್ವಾಮಿ ಹೇಳಿದರು. ಈ ಸಂಜೆಯೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜೆಡಿಎಸ್‍ನಿಂದ ಅಮಾನತುಗೊಂಡ 7ಮಂದಿ ಶಾಸಕರೂ ಭೇಟಿಯಾಗಿದ್ದೇವು. ಆ ಸಂದರ್ಭದಲ್ಲಿ ನಮ್ಮನ್ನು ವಿಶ್ವಾಸದಿಂದ ಮಾತನಾಡಿಸಿದ್ದಾರೆ. ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರುಗಳು ಉಪಸ್ಥಿತರಿದ್ದರು ಎಂದರು.
ಮುಂದಿನ ಡಿಸೆಂಬರ್ ನಂತರ ಅಧಿಕೃತವಾಗಿ 7 ಮಂದಿಯೂ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇವೆ. ರಾಹುಲ್‍ಗಾಂಧಿಯವರನ್ನು ಭೇಟಿ ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಾರೆಂಬ ವಿಶ್ವಾಸವನ್ನು ಮೂಡಿಸಿದೆ ಎಂದು ಹೇಳಿದರು.

ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರುಗಳು ನಮ್ಮ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರಾಗಿರುವುದರಿಂದ ಹೈಕಮಾಂಡ್ ಭೇಟಿ ನಂತರ ಅವರುಗಳನ್ನು ಸೌಜನ್ಯಯುತವಾಗಿ ಭೇಟಿಯಾಗಿದ್ದೆವು ಎಂದು ಚಲುವರಾಯ ಸ್ವಾಮಿ ಅವರು ತಿಳಿಸಿದರು.

ಪುಲಕೇಶಿ ನಗರದಿಂದಲೇ ಸ್ಪರ್ಧೆ:

ಜಿ.ಪರಮೇಶ್ವರ್ ಆಗಲೀ , ಬೇರೆಯವರಾಗಲೀ ಯಾರೂ ಸ್ಪರ್ಧಿಸು ವುದಿಲ್ಲ. ನಾನೇ ಕಣಕ್ಕಿಳಿಯುತ್ತೇನೆ ಎಂದು ಪ್ರಸ್ತುತ ಪುಲಕೇಶಿ ನಗರದ ಶಾಸಕರಾಗಿರುವ ಅಖಂಡ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.  ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ನನಗೆ ಅಭಯ ನೀಡಿದ್ದಾರೆ. ಕಾಂಗ್ರೆಸ್‍ನಿಂದ ಟಿಕೆಟ್ ಸಿಗುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

Facebook Comments

Sri Raghav

Admin