ಕುರಿಗಾಯಿಯ ಮೇಲೆ ಕರಡಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು,ಆ.18- ಕುರಿ ಕಾಯುತ್ತಿದ್ದವನ ಮೇಲೆ ಕರಡಿ ದಾಳಿ ನಡೆಸಿದ್ದು, ಆತ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗುಬ್ಬಿ ತಾಲೂಕಿನ ಮುದ್ರಾಪುರದ ಗ್ರಾಮದಲ್ಲಿ ಸಿದ್ದಲಿಂಗಯ್ಯ(55) ಕುರಿ ಕಾಯುತ್ತಿದ್ದ ವೇಳೆ ಕರಡಿಯು ಏಕಾಏಕಿ ದಾಳಿ ನಡೆಸಿದೆ. ಸಿದ್ದಲಿಂಗಯ್ಯ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಗುಬ್ಬಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದು, ಅಲ್ಲಿನ ವೈದ್ಯರು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದಾರೆ.

Facebook Comments

Sri Raghav

Admin