ಪದ್ಮಪ್ರಿಯಾ ಆತ್ಮಹತ್ಯೆ : ಅತುಲ್‍ರಾವ್ ವಿರುದ್ಧ ತನಿಖೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

ಈ ಸುದ್ದಿಯನ್ನು ಶೇರ್ ಮಾಡಿ

Padmapriya--01

ನವದೆಹಲಿ, ಆ.18-ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅತುಲ್‍ರಾವ್ ವಿರುದ್ಧ ತನಿಖೆಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. ರಾವ್ ವಿರುದ್ಧ ತನಿಖೆ ನಡೆಸಲು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ನಿರಾಕರಿಸಿದೆ. ಈ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮನವಿಯನ್ನು ತಿರಸ್ಕರಿಸಿತು. ಬಿಜೆಪಿ ಮಾಜಿ ಶಾಸಕರ ಪತ್ನಿ ಪದ್ಮಪ್ರಿಯಾ ದೆಹಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಉಡುಪಿಯಿಂದ ನಾಪತ್ತೆಯಾಗಿದ್ದ ಅವರ ಶವ ದೆಹಲಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣ ಸಾಕಷ್ಟು ಕುತೂಹಲ ಕೆರಳಿಸಿತ್ತು.
ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ ಅತುಲ್‍ರಾವ್ ವಿರುದ್ಧ ಅಪಹರಣ ಮತ್ತು ಆತ್ಮಹತ್ಯೆ ಪ್ರಚೋದನೆ ಆರೋಪಗಳ ಮೇಲೆ ಮಣಿಪಾಲ್ ಪೊಲೀಸರು ಬಂಧಿಸಿದ್ದರು. ಪದ್ಮಪ್ರಿಯಾ ಭಟ್ ಸಾವಿನ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು.

Facebook Comments

Sri Raghav

Admin